ವಿಶ್ವ ಕನ್ನಡ ಸಮ್ಮೇಳನ - ಏನಿದೆ, ಏನಿರಬೇಕಾಗಿತ್ತು?

0 views
Skip to first unread message

Gulbarga mail Box

unread,
Mar 10, 2011, 4:43:20 AM3/10/11
to glbmail...@googlegroups.com


 

ಗೆಳೆಯರೆ,


ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಏನಿದೆ, ಏನಿರಬೇಕಾಗಿತ್ತು ಅನ್ನುವ ಬಗ್ಗೆ ನನ್ನ ಅನಿಸಿಕೆ.

ತಮ್ಮ ತಮ್ಮ ತಾಯ್ನುಡಿಯನ್ನು ಜಾಗತೀಕರಣದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಎಲ್ಲ ದೇಶಗಳು ಏಳಿಗೆ ಸಾಧಿಸಿ ಮುನ್ನಡೆದಿದ್ದರೆ, ಅಂತಹದೊಂದು ಕನಸು ಕಾಣುವುದೇ ಅಪರಾಧ, ಅದು ಎಂದಿಗೂ ಸಾಧ್ಯವಿಲ್ಲ ಅನ್ನುವ ಆತ್ಮಹತ್ಯಾ ಭಾವ ಆವರಿಸಿಕೊಂಡಿರುವ ಭಾರತದಂತಹ ದೇಶ, ಏಳಿಗೆ ಹೊಂದಿರುವ ದೇಶದ ಬ್ಯಾಕ್ ಆಫೀಸ್ ನಂತೆ ಕೆಲಸ ಮಾಡುತ್ತ ಒಂದಿಷ್ಟು ಸರ್ವಿಸಸ್ ನ ಪುಡಿಗಾಸು ಸಂಪಾದಿಸಿಕೊಂಡು, ಅದನ್ನೇ ಏಳಿಗೆ ಎಂದು ನಂಬಿ, ಸಮಾಜವನ್ನು ನಂಬಿಸುವಂತಹ ದಡ್ಡತನ ತೋರಿಸುತ್ತಿದೆ. ಹೀಗೆ ಹುಟ್ಟುತ್ತಿರುವ ಪುಡಿಗಾಸಿಗೆ ಕಾರಣವಾಗಿರುವ ಇಂಗ್ಲಿಷ್ ಒಂದೇ ನಮ್ಮನ್ನು ನಮ್ಮ ಬಡತನದಿಂದ, ದಾರಿದ್ರ್ಯದಿಂದ, ಕಷ್ಟದಿಂದ ಪಾರು ಮಾಡುವ ಕಾಮಧೇನು ಅನ್ನುವ ಕೆಲವು ಪ್ರಭಾವಿಗಳ ನಂಬಿಕೆಗಳು ತಾಯ್ನುಡಿ ಶಿಕ್ಷಣವನ್ನು ಮೇಲೆತ್ತುವ, ಅದರಲ್ಲಿ ಅನ್ನದ ವಿದ್ಯೆ ತರುವ, ಆ ಮೂಲಕ ಒಳ್ಳೆಯ ದುಡಿಮೆ ಹುಟ್ಟಿಸುವ ವ್ಯವಸ್ಥೆಗೆ ಅಡಿಪಾಯ ಹಾಕಬೇಕಿದ್ದ ಸರ್ಕಾರದ ದಿಕ್ಕು ತಪ್ಪಿಸುತ್ತಿದೆ ಅಂದರೆ ತಪ್ಪಾಗದು.
http://vasantabanda.blogspot.com/2011/03/vishwa-kannada-sammelana-enide.html

-ವಸಂತ

__._,_.___
Recent Activity:
Naadigaagi Niranthara........
.

__,_._,___

Reply all
Reply to author
Forward
0 new messages