ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ , ಭಕ್ತಿ ಭಂಡಾರಿ ಬಸವಣ್ಣನವರ ಸಣ್ಣ ನೆನಪು

5 views
Skip to first unread message

ನನ್ ಅಂಚೆ

unread,
Feb 19, 2009, 1:22:09 AM2/19/09
to namka...@googlegroups.com


ಗೆಳೆಯರೇ ಅಣ್ಣ ಬಸವಣ್ಣನವರ ಸ್ವಲ್ಪ ನೆನೆಯೋಣ

ಬಸವೇಶ್ವರರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವಲ್ಲಿದ್ದಾನೆ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನೆಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು,ಪ್ರಾಣಿಬಲಿ ನೀಡುವುದು,ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ. ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು.

ಸವಣ್ಣನವರ ವಚನಗಳು

ನೀನೊಲಿದರೆ ಕೊರಡು ಕೊನರುವುದಯ್ಯ
ನೀನೊಲಿದರೆ ಬರಡು ಹಯನಹುದಯ್ಯ
ನೀನೊಲಿದರೆ ವಿಷವಮೃತವಹುದಯ್ಯ
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ

ನೀರಿಂಗೆ ನೈದಿಲೆಯೇ ಶೃಂಗಾರ
ಊರಿಂಗೆ ಅಕನೆಯೇ ಶೃಂಗಾರ
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗಮನ ಶರಣರಿಗೆ
ನೊಸಲ ವಿಭೂತಿಯೇ ಶೃಂಗಾರ

ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ?

ಲೋಕದ ಡೊಂಕ ನೀವೇಕೆ ತಿದ್ದುವಿರಿ?
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದು:ಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ

ಹಾವು ತಿಂದವರ ನುಡಿಸಬಹುದು
ಗರ ಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ

ಕಳಬೇಡ ಕೊಲಬೇಡ
ಹುಸಿಯ ನುಡಿಯಲು ಬೇಡ
ಮುನಿಯ ಬೇಡ
ಅನ್ಯರಿಗೆ ಅಸಹ್ಯಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲು ಬೇಡ
ಇದೇ ಅಂತರಂಗಶುದ್ಧಿ
ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ

ಮಾಡುವಂತಿರಬೇಕು, ಮಾಡದಂತಿರಬೇಕು!
ಮಾಡುವ ಮಾಟದೊಳಗೆ ತಾನಿಲ್ಲದಿರಬೇಕು!!
ನೋಡುವಂತಿರಬೇಕು, ನೋಡದಂತಿರಬೇಕು!
ನೋಡುವ ನೋಟದೊಳಗೆ ತಾನಿಲ್ಲದಿರಬೇಕು!!
ನಮ್ಮ ಕೂಡಲಸಂಗಮದೇವರ
ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು!

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ.
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ,
ಕೂಡಿಕೊಂಬುವ ನಮ್ಮ ಕೂಡಲಸಂಗಮದೇವ

ಕಲ್ಲನಾಗರ ಕಂಡರೆ ಹಾಲನೆರೆ ಎಂಬರು;
ದಿಟನಾಗರ ಕಂಡರೆ ಕೊಲ್ಲು ಕೊಲ್ಲು ಎಂಬರಯ್ಯ!
ಉಂಬ ಜಂಗಮ ಬಂದರೆ ನಡೆ ಎಂಬರು;
ಉಣ್ಣದ ಲಿಂಗಕ್ಕೆ ಬೋನವ ಹಿಡಿ ಎಂಬರಯ್ಯ!
ನಮ್ಮ ಕೂಡಲಸಂಗನ ಶರಣರ ಕಂಡು
ಉದಾಸೀನವ ಮಾಡಿದರೆ,
ಕಲ್ಲತಾಗಿದ ಮಿಟ್ಟೆಯಂತಪ್ಪರಯ್ಯ!


ಅಣ್ಣನವರ ಸಣ್ಣ ನೆನಪಿನ ವಚನ ಮಾಲೆ





--
ಇಂತಿ  
ಎಚ್.ಕೆ.ಎಂ.ಸ್ವಾಮಿ
ಅಧಿಕಾರಿ - ಮಾನವ ಸಂಪನ್ಮೂಲ
ಯೇಸ್ಜ್ ಎಕ್ಸ್ಪರ್ಟ್
ಮೈಸೂರು
a_Basavanna_Cave.jpg
789px-Basava_statue.jpg
Reply all
Reply to author
Forward
0 new messages