KOPPAL VARTHE
unread,Jul 11, 2019, 8:23:21 AM7/11/19Sign in to reply to author
Sign in to forward
You do not have permission to delete messages in this group
Either email addresses are anonymous for this group or you need the view member email addresses permission to view the original message
to Somareddy Alavandi, nadanudi Gangavati, Dist. Information Officer Information, Lokadarshan News Paper, navodayadaily, Veeru Veeru, tippanagouda malipatil, Girish Kulkarni, veerupatil143, Shreepada Ayachit, Gangadhar Bandihal, PRAJAVANI KOPPALA, samarthavani, Harsih HS Koppal, Mounesh Badiger, Eshanya Times, varthabha...@googlegroups.com, Suvarnagiri Gvt, VIJAYAVANI KPL, nagarikkpl, Koppal Varthe, Dattu Kammar, murugesh b s, Nabhiraj Dastenavar, Ybjudi Judi, Rajasa Mullar, uv koppal, Bellary Belagayithu, basavaraj binnal, kakarlamallikarjun, Manjunath H Irakal, janakoogu, Basavaraj Karugal, Shivaraj Nugadoni, airhptco...@gmail.com, vasudev vasu, Devu Tungasiri, mahadevgouda patil, venkatesh kulkarni, Vartha Loka, Akshay BS, Raju Br, Information Department, M. Ahiraj Ahiraj, shivakumar k, Arvind Last, shukraj gangavati, suddimoola24, suddimoola, Shivakumar Pattar, Kranti KD, Basavaraj Basavaraj, sangameshchilly, basavaraja karkihalli, sharanappa kumbar, Sharanabasava Gaddi, Moulahusain Buldiyar, pavan deshpande, kitturkarnatakagadag, vinaya...@gmail.com, Informationdep Informationdep, Gavisidd Hosamani, mohammedkh...@gmail.com, siraj bisaralli, Areef Ahmad, gururaj dambal, mavinashk8, rbadiger2, bvenka...@yahoo.in, Manjunath Gondbal, Anmol times3, Kalyana darshana, Karnatak Times, H.mallikarjuna Editor Kalyanasiri kannada Daily, K Sandyakala, Muttu won, mallu uppar, Doddesh Yaligar, munjaneex...@gmail.com, koppal...@gmail.com, hinduka...@gmail.com, hndoddamani
ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿ ಕುಂಠಿತ : ಆರ್.ಎಸ್. ಪೆದ್ದಪ್ಪಯ್ಯ
ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ಜನಸಂಖ್ಯೆ ಸ್ಪೊÃಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ಇದರಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್ ಪೆದ್ದಪ್ಪಯ್ಯ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಕೊಪ್ಪಳ ತಾಲೂಕ್ ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ``ವಿಶ್ವ ಜನಸಂಖ್ಯಾ ದಿನಾಚರಣೆ’’ ಪ್ರಯುಕ್ತ ಗುರುವಾರದಂದು ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜನಸಂಖ್ಯೆಯಲ್ಲಿ ವಿಶ್ವದಲ್ಲಿ ಚೀನಾ ದೇಶ ಮೊದಲ ಸ್ಥಾನದಲ್ಲಿ ಇದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ಜುಲೈ 11 ರಂದು ‘’ವಿಶ್ವ ಜನಸಂಖ್ಯಾ ದಿನಾಚರಣೆ’’ ಇಡೀ ದೇಶದ್ಯಾಂತ ಆಚರಿಸಲಾಗುತ್ತದೆ. ಜನಸಂಖ್ಯೆ ಸ್ಪೊÃಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತವೆ. ದೇಶದ ನೈಸರ್ಗಿಕ ಸಂಪತ್ತು ಭೂಮಿ, ಇತರೇ ಸಂಪನ್ಮೂಲ ಇದ್ದಷ್ಟೆÃ ಇರುತ್ತದೆ. ಆದರೆ ಜನಸಂಖ್ಯೆ ಮಾತ್ರ ನಾಗಲೋಟದಿಂದ ಏರುತ್ತಲಿದೆ. ಜನಸಂಖ್ಯೆ ಸ್ಪೊÃಟದಿಂದ ಆಹಾರ, ನೀರು, ಬಟ್ಟೆ ಹಾಗೂ ಖನಿಜಗಳ ಕೊರತೆ, ಸಸ್ಯ ಸಂಪತ್ತಿನ ಕೊರತೆ, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಕೊರತೆ ಮತ್ತು ವಾಯು, ಜಲ, ಶಬ್ದ ಮಾಲಿನ್ಯ ಉಂಟಾಗುತ್ತದೆ. ಜನಸಂಖ್ಯೆ ಹೆಚ್ಚಳದಿಂದ ನಗರ ವ್ಯಾಪ್ತಿಯ ಕೊಳಚೆ ಪ್ರದೇಶಗಳು ಸಹ ಹೆಚ್ಚಾಗುತ್ತವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುತ್ತೆÃವೆ. ಆದ್ದರಿಂದ ಭಾರತೀಯ ಪ್ರತಿಯೊಬ್ಬ ಪ್ರಜೆಗಳು ಜನಸಂಖ್ಯೆ ನಿಯಂತ್ರಣ ಬಗ್ಗೆ ಅರಿವು ಮೂಡಿಸಬೇಕು. ಮದುವೆ ವಯಸ್ಸು, ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಮತ್ತು ಶ್ವಾಶತ ವಿಧಾನಗಳ ಬಗ್ಗೆ ವಿವಿಧ ಸಂಘ ಸಂಸ್ಥೆಗಳು ಇಲಾಖೆಯವರುದೊಂದಿಗೆ ಕೈಜೋಡಿಸಿ, ಸಹಕರಿಸಬೇಕು. ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳತ್ತದೆ. ಆದ್ದರಿಂದ ಪ್ರತಿಯೊಬ್ಬರು ಜನಸಂಖ್ಯೆ ನಿಯಂತ್ರಣ ತರುವಲ್ಲಿ ಸಹರಿಸಬೇಕು. ಶಿಕ್ಷಣ ಇಲಾಖೆಯವರು ಕಾಲೆಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು, ಭಾಷಣ ಸ್ಪರ್ಧೆÃ ಏರ್ಪಡಿಸುವುದರ ಮೂಲಕ ಜಾಗೃತಿ ಮೂಡಿಸುವುದು. ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆ ಬೇಟಿ ನೀಡಿದಾಗ ಜನಸಂಖ್ಯೆ ನಿಯಂತ್ರಣ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್ ಪೆದ್ದಪ್ಪಯ್ಯರವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಎಸ್ ಯರಗಲ್ಲ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಟಿ ಲಿಂಗರಾಜ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಕ್ಷಯರೋಗ ನಿಯಂತ್ರÀಣಾಧಿಕಾರಿ ಡಾ.ಮಹೇಶ, ಬಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಂಬಯ್ಯ , ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೆÃಶಕ ಈರಣ್ಣ ಪಾಂಚಾಳ, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ, ಡಾ. ವೇಂಕಟೇಶ, ಡಾ.ಪ್ರಶಾಂತ, ಜಿಲ್ಲಾ ಪ್ರಭಾರಿ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹಿರಿಯ ಆರೋಗ್ಯ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕ ಕೇಂದ್ರ ವಿಧ್ಯಾರ್ಥಿನಿಯರು, ಆಶಾ ಕಾರ್ಯಕರ್ತೆಯರು, ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು, ಸಿಬ್ಬಂದಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವರ್ಷದ ಘೋಷಣೆ ``ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ ತಾಯಿ ಮತ್ತು ಮಗುವಿನ ಆರೋಗ್ಯ ಪೂರ್ಣ ತಯಾರಿ’’ ಎಂಬುವುದಾಗಿದೆ. ಜನಜಾಗೃತಿ ಜಾಥಾ ಕಾರ್ಯಕ್ರಮವು ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಡಾ. ಸಿಂಪಿಲಿಂಗಣ್ಣ ರಸ್ತೆ, ನಗರ ಪೋಲಿಸ್ ಸ್ಟೆÃಷನ್ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆಗೆ ಬರಲಾಯಿತು. ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಜನಸಂಖ್ಯೆಗೆ ಸಂಬಂಧಿಸಿದ ಜಾನಪದ ಗೀತೆ ಘೋಷಣೆಗಳನ್ನು ಹೇಳಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಮತ್ತು ‘’ಚಿಕ್ಕ ಸಂಸಾರ- ಚೊಕ್ಕ ಸಂಸಾರ’’, ‘’ಮದುವೆ ವಯಸ್ಸು ಗಂಡಿಗೇ 21 ವರ್ಷ ಹೆಣ್ಣಿಗೆ 18 ವರ್ಷ’’ ಒಂದು ಮಗುವಿನೊಂದಿಗೆ ಇನ್ನೊಂದು ಮಗುವಿಗೆ ಕನಿಷ್ಠ 03 ವರ್ಷ ಅಂತರವಿರಲಿ’’, ‘’ ಜುಲೈ, 11 ವಿಶ್ವ ಜನಸಂಖ್ಯಾ ದಿನಾಚರಣೆ ‘’ ಕುಟುಂಬ ಕಲ್ಯಾಣದ ತಾತ್ಕಾಲಿಕ ಹೊಸ ವಿಧಾನಗಳನ್ನು ಬಳಸಿರಿ ಎಂಬ ಘೋಷಣೆ ಬರಹಗಳನ್ನು ವಿದ್ಯಾರ್ಥಿಗಳು ಕೈಯಲ್ಲಿ ಹಿಡಿದುಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
======
ಗೆಳತಿ ವಿಶೇಷ ಚಿಕಿತ್ಸಾ ಘಟಕ : ಮಹಿಳಾ ಸಮಾಜ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಜಿಲ್ಲೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ಖಾಲಿ ಇರುವ ಒಂದು ಸಮಾಜ ಕಾರ್ಯಕರ್ತೆರ ಹುದ್ದೆಗಾಗಿ ತಾತ್ಕಾಲಿಕ ಆಧಾರ ಮೇಲೆ ನೇಮಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಎಂಎಸ್‌ಡಬ್ಲೂ., ಎಂ.ಎ. ಅಥವಾ ಯಾವುದಾದರು ಒಂದು ವಿಷಯದಲ್ಲಿ ಸ್ನಾತಕೊತ್ತರ ಪದವಿ ಹೊಂದಿರಬೇಕು. ಐದು ವರ್ಷ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಸ್ಥಳೀಯ ಜಿಲ್ಲೆಯ ಮಹಿಳಾ ಅಭ್ಯರ್ಥಿಯಾಗಿರಬೇಕು. ಮಾಸಿಕ ರೂ. 10,000 (ಹತ್ತು ಸಾವಿರ) ಗೌರವಧನ ನೀಡಲಾಗುವುದು. ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಹಾಗೂ ವಿಶ್ವ ವಿದ್ಯಾಲಯಗಳಿಂದ ಪದವಿ ಪಡೆದಿರಬೇಕು. ಗೌರವಧನ ಆಧಾರದ ಮೇಲೆ 2019-20ನೇ ಸಾಲಿನ ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಯೋಜನೆಯು 24*7 ಸೇವೆಯಾಗಿದ್ದು, ಯಾವುದೇ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ದರಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಅರೆಕಾಲಿಕ ಹಾಗೂ ತಾತ್ಕಾಲಿಕ ಆಧಾರದ ಹುದ್ದೆಯಾಗಿದ್ದು, ಯಾವುದೇ ಕಾರಣಕ್ಕೂ ಸಕ್ರಮಗೊಳಿಸುವುದಿಲ್ಲ. ನೇಮಕಗೊಂಡ ಸಿಬ್ಬಂದಿಗಳ ಸೇವೆಯು ಸರ್ಕಾರದ ಅನುದಾನದ ಲಭ್ಯತೆಯ ಆಧಾರ ಮೇಲಿರುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿರುತ್ತದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಸಂದರ್ಶನದಲ್ಲಿ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸುವಾಗ ಸ್ನಾತಕೋತ್ತರ ಪದವಿಯಲ್ಲಿ ಪಡೆದ ಅಂಕ, ಅರ್ಜಿಸಲ್ಲಿಸಲಾದ ಹುದ್ದೆಯಲ್ಲಿನ ಕಾರ್ಯಾನುಭವ ಹಾಗೂ ಸೇವಾ ಮನೋಭಾವ ಆಸಕ್ತಿಯನ್ನು ಪರಿಗಣಿಸಲಾಗುವುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಶಿಫಾರಸ್ಸು ಮತ್ತು ಮನವಿಗಳಿಗೆ ಮಾನ್ಯತೆ ಇರುವುದಿಲ್ಲ. ಅರ್ಜಿಗಳನ್ನು ಶೀಲ್ಡ ಕವರನಲ್ಲಿ ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಕಛೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಆಡಳಿತ ಭವನ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಸಕರ ಕಛೇರಿಯ ದೂ.ಸಂ- 08539,222703 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೆಶಕರುÀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಜು. 12 ರಂದು ಕೊಪ್ಪಳದಲ್ಲಿ ಅಂಗವಿಕಲರ ಆರೋಗ್ಯ ತಪಾಸಣೆ ಕಾರ್ಯಕ್ರಮ
ಕೊಪ್ಪಳ ಜು. 11 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ಕಾರ್ಯಾಲಯ ವತಿಯಿಂದ ಅಂಗವಿಕಲರ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಜು. 12 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಮಹಿಳೆಯರ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ನಗರಸಭಾ ವ್ಯಾಪ್ತಿಯಲ್ಲಿ ಜು. 09 ರಿಂದ 11 ರವರೆಗೆ ಕಳೆದ ಮೂರು ದಿನಗಳವರೆಗೆ 21 ಬಗೆಯ ಅಂಗವಿಕಲರ ಸಮೀಕ್ಷಾ ಕಾರ್ಯವನ್ನು ಕೈಗೊಂಡಿದ್ದು, ಈ ಕಾರ್ಯಕ್ರಮ ಪೂರ್ಣಗೊಂಡಿರುತ್ತದೆ. ಜು. 12 ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳೆಯರ ಕಾಲೇಜಿನಲ್ಲಿ ನಗರದಲ್ಲಿ ಗುರುತಿಸಿದ 21 ವಿವಿಧ ಅಂಗವಿಕಲತೆ ಹೊಂದಿರುವ ಅಂಗವಿಕಲರ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ನೆರವೇರಿಸಲಿದ್ದಾರೆ. ಈ ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮದಲ್ಲಿ ಎಲ್ಲಾ ಪತ್ರಿಕಾ ಮಾಧ್ಯಮದವರು ಮತ್ತು ಮೀಡಿಯಾ ಮಾಧ್ಯಮದವರು ಉಪಸ್ಥಿತರಿದ್ದು, ಕಾರ್ಯಾಕ್ರಮವನ್ನು ಯಶಸ್ವಿಗೊಳಿಸಲು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
======