Koppal News & Photos July-17

35 views
Skip to first unread message

KOPPAL VARTHE

unread,
Jul 17, 2019, 7:57:34 AM7/17/19
to Somareddy Alavandi, nadanudi Gangavati, Dist. Information Officer Information, Lokadarshan News Paper, navodayadaily, Veeru Veeru, tippanagouda malipatil, Girish Kulkarni, veerupatil143, Shreepada Ayachit, Gangadhar Bandihal, PRAJAVANI KOPPALA, samarthavani, Harsih HS Koppal, Mounesh Badiger, Eshanya Times, varthabha...@googlegroups.com, Suvarnagiri Gvt, VIJAYAVANI KPL, nagarikkpl, Koppal Varthe, Dattu Kammar, murugesh b s, Nabhiraj Dastenavar, Ybjudi Judi, Rajasa Mullar, uv koppal, Bellary Belagayithu, basavaraj binnal, kakarlamallikarjun, Manjunath H Irakal, janakoogu, Basavaraj Karugal, Shivaraj Nugadoni, airhptco...@gmail.com, vasudev vasu, Devu Tungasiri, mahadevgouda patil, venkatesh kulkarni, Vartha Loka, Akshay BS, Raju Br, Information Department, M. Ahiraj Ahiraj, shivakumar k, Arvind Last, shukraj gangavati, suddimoola24, suddimoola, Shivakumar Pattar, Kranti KD, Basavaraj Basavaraj, sangameshchilly, basavaraja karkihalli, sharanappa kumbar, Sharanabasava Gaddi, Moulahusain Buldiyar, pavan deshpande, kitturkarnatakagadag, vinaya...@gmail.com, Informationdep Informationdep, Gavisidd Hosamani, mohammedkh...@gmail.com, siraj bisaralli, Areef Ahmad, gururaj dambal, mavinashk8, rbadiger2, bvenka...@yahoo.in, Manjunath Gondbal, Anmol times3, Kalyana darshana, Karnatak Times, H.mallikarjuna Editor Kalyanasiri kannada Daily, K Sandyakala, Muttu won, mallu uppar, Doddesh Yaligar, munjaneex...@gmail.com, koppal...@gmail.com, hinduka...@gmail.com, hndoddamani
ಬರ ನಿರ್ವಹಣೆ;
ಹಸಿರು ಮೇವು ಒದಗಿಸಲು ಹಾಲು ಉತ್ಪಾದಕ ಸೊಸೈಟಿಗಳಿಗೆ ಆದ್ಯತೆ ನೀಡಿ : ಹರ್ಷ ಗುಪ್ತ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ):
  ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರು ಸಂರಕ್ಷಣೆಗಾಗಿ 7 ಗೋಶಾಲೆಗಳನ್ನು ನಡೆಸಲಾಗುತ್ತಿದ್ದು ಸಬ್ಸಿಡಿ ದರದಲ್ಲಿ ಮೇವು ಬ್ಯಾಂಕ್‌ಗಳ ಮೂಲಕವೂ ಮೇವು ಕಲ್ಪಿಸಲಾಗುತ್ತಿದೆ. ಇದರೊಂದಿಗೆ ಸರ್ಕಾರದ ಜಮೀನು, ಕರೆ ಅಂಗಳದಲ್ಲಿ ಹಸಿರು ಮೇವು ಬೆಳೆಸಲು ಮೂಲ ಭೂತ ಸೌಕರ್ಯವನ್ನು ಕಲ್ಪಿಸಿ ನಿರ್ವಹಣೆಗೆ ಹಾಲು ಉತ್ಪಾದಕ ಸೊಸೈಟಿಗಳಿಗೆ ವಹಿಸುವುದರಿಂದ ಇನ್ನೂ ಪರಿಣಾಮಕಾರಿಯಾಗಿ ನಿರ್ವಹಣೆ ಸಾಧ್ಯವಾಗಲಿದೆ ಎಂದು ರಾಜ್ಯ ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹರ್ಷ ಗುಪ್ತ ತಿಳಿಸಿದರು.
  ಅವರು ಇಂದು (ಜುಲೈ. 17) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿನ ಬರ ನಿರ್ವಹಣೆ ಮತ್ತು ವಿವಿಧ ಇಲಾಖೆಗಳಲ್ಲಿನ ಪ್ರಗತಿ ಪರಿಶೀಲನೆ ವೇಳೆ ತಿಳಿಸಿದರು.
  ಜಿಲ್ಲೆಯಲ್ಲಿ ಅಂದಾಜು 2.83 ಲಕ್ಷ ಜಾನುವಾರುಗಳಿದ್ದು ಇದರಲ್ಲಿ 4 ಸಾವಿರದಷ್ಟು ಜಾನುವಾರುಗಳಿಗೆ ಗೋಶಾಲೆಯಲ್ಲಿ ಮೇವು ವಿತರಿಸಲಾಗುತ್ತಿದೆ. ಮತ್ತು ಮೇವು ಬ್ಯಾಂಕ್‌ಗಳಲ್ಲಿ ಪ್ರತಿ ಕೆಜಿಗೆ 2 ರೂ.ಗಳ ದರದಲ್ಲಿ ಮೇವು ವಿತರಣೆ ಮಾಡಲಾಗುತ್ತಿದೆ. ಆದರೆ ಜಾನುವಾರುಗಳ ಸಂಖ್ಯೆ ಹೆಚ್ಚಿರುವುದರಿಂದ ಎಲ್ಲಾ ಜಾನುವಾರುಗಳಿಗೂ ಮೇವು ವಿತರಿಸಬೇಕು. ಇದಕ್ಕಾಗಿ ರೈತರಿಗೆ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರೊಂದಿಗೆ ಎಲ್ಲೆಲ್ಲಿ ಅವಕಾಶವಿದೆ ಅಂತಹ ಕಡೆ ಹಸಿರು ಮೇವನ್ನು ಬೆಳಸಲು ಸ್ಥಳ ಗುರುತಿಸಿ ಇದಕ್ಕೆ ಬೇಕಾದ ನೀರು, ತಡೆ ಬೆಲಿ ನಿರ್ಮಿಸಿ ಆಯಾ ಭಾಗದ ಹಾಲು ಉತ್ಪಾದಕರ ಸೊಸೈಟಿಗಳಿಗೆ ನಿರ್ವಹಣೆಗೆ ಮತ್ತು ವಿತರಣೆಗೆ ನೀಡುವುದರಿಂದ ಸಾರ್ವಜನಿಕರ ಸಹಭಾಗಿತ್ವ ಮತ್ತು ಪಾರದರ್ಶಕವಾಗಿರುತ್ತದೆ. ಮತ್ತು ಇದು ಖಾಯಂ ವ್ಯವಸ್ಥೆಯಾಗಿರುತ್ತದೆ. ಈಗಾಗಲೇ ಈ ವ್ಯವಸ್ಥೆ ಗುಜರಾತ ರಾಜ್ಯದಲ್ಲಿದೆ ಎಂದರು.
ಕುಡಿಯುವ ನೀರು;
  ಜಿಲ್ಲೆಯ 17 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಆ ಗ್ರಾಮಗಳಲ್ಲಿ ಲಭ್ಯವಿರುವ ಖಾಸಗಿ ಬೋರ್‌ವೇಲ್‌ಗಳ ಮಾಲೀಕರ ಮನವಲಿಸಿ ನಿಯಮಾನುಸಾರ ಆ ನೀರನ್ನು ಗ್ರಾಮದ ಜನರಿಗೆ ಪೂರೈಸಲು ಕ್ರಮ ಕೈಗೊಂಡು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಸೂಕ್ತ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾನ ದಿನಗಳನ್ನು ಸೃಷ್ಠಿಸಿ;
  ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಆಗದ ಕಾರಣ ಭೀಕರ ಬರಗಾಲ ಸ್ಥಿತಿಯಿದೆ. ಆದ್ದರಿಂದ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಠಿಸಬೇಕು. ನರೇಗಾದಡಿ ನೋಂದಣಿ ಮಾಡಿಕೊಂಡ ಕೂಲಿಕಾರರಿಗೆ ನಮೂನೆ-6 ನ್ನು ಸಂಬಂಧಿಸಿ ಗ್ರಾಮ ಪಂಚಾಯತ್‌ಗಳು ಒದಗಿಸಬೇಕು. ನಮೂನೆ-6 ನ್ನು ನೀಡಿದ  15 ದಿನಗಳಲ್ಲಿ ಆ ವ್ಯಕ್ತಿಗೆ ಕೆಲಸ ನೀಡಬೇಕು. ಮಾನವ ದಿನಗಳ ಸೃಷ್ಠಿಯಲ್ಲಿ ಇದುವರೆಗೆ ಕಡಿಮೆ ಸಾಧನೆ ಮಾಡಿರುವ ತಾಲೂಕುಗಳಲ್ಲಿ ಸಂಬಂಧಿಸಿ ಕಾರ್ಯನಿವಾರ್ಹಕ ಅಧಿಕಾರಿಗಳು, ಪಿಡಿಒಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ದಿನಗಳನ್ನು ಸೃಷ್ಠಿಸಿ ಬರಗಾಲದ ಸಂದರ್ಭದಲ್ಲಿ ಜನರಿಗೆ ಉದ್ಯೊÃಗ ಒದಗಿಸಿ ಅನುಕೂಲ ಮಾಡಿಕೊಡಬೇಕು ಎಂದರು.
  ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಾತನಾಡಿ, ಕಳೆದ ವರ್ಷ 36 ಲಕ್ಷ ಮಾನವ ದಿನಗಳ ಸೃಜನೆ ಗುರಿಯಲ್ಲಿ 42 ಲಕ್ಷ ಸಾಧನೆ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 44 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು ಜೂನ್ ವರೆಗೆ 14.94 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಬರ ಪರಿಸ್ಥಿತಿ ಇರುವುದರಿಂದ ಜನರಿಗೆ ಉದ್ಯೊÃಗ ಕೊಡಲು ಸಮುದಾಯದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಮತ್ತು ಕೆರೆ ಹೂಳೆತ್ತುವ ಕೆಲಸವನ್ನು ಕೈಗೊಳ್ಳಲಾಗಿದೆ. ಇಂತಹ ಕಡೆ 1500 ರಿಂದ 2000 ವರೆಗೆ ಜನರು ಭಾಗವಹಿಸುತ್ತಿದ್ದಾರೆ ಎಂದು ಮಾಹಿತಿ ನಿಡಿದರು. ಮತ್ತು ಕರ್ನ್ವಜಂನ್ಸ್ ಅಡಿ ಕೃಷಿ ಇಲಾಖೆ, ತೋಟಗಾರಿಕೆ ಸೇರಿದಂತೆ ವೈಯಕ್ತಿಕ ಕಾಮಗಾರಿಗಳು ಸಹ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.    
  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ರೈತರಿಗೆ ವಾರ್ಷಿಕ 6000 ರೂ.ಗಳನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಇದಕ್ಕಾಗಿ ಎಲ್ಲಾ ಅಂಕಿ ಅಂಶಗಳನ್ನು ಸಂಗ್ರಹಿ ಕಳುಹಿಸಬೇಕಾಗಿದೆ. ಜಿಲ್ಲೆಯಲ್ಲಿ 2.32 ಲಕ್ಷ ರೈತರಿದ್ದು ಇದರಲ್ಲಿ 1.52 ಲಕ್ಷ ರೈತರು ನೋಂದಣಿ ಮಾಡಿದ್ದಾರೆ. ಅನರ್ಹರನ್ನು ಪರಿಶೀಲಿಸಿ ಅರ್ಹರ ಪಟ್ಟಿ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
  ಉಸ್ತುವಾರಿ ಕಾರ್ಯದರ್ಶಿಗಳು ಮಾತನಾಡಿ ರೈತ ಸಾಲ ಮನ್ನಾ ಸೇರಿದಂತೆ ರೈತರ ಬ್ಯಾಂಕ್ ಖಾತೆಯ ಆಧಾರ ಸಂಖ್ಯೆ ಜೋಡಿಸುವಲ್ಲಿ ಇರುವ ತಾಂತ್ರಿಕ ತೊಂದರೆಗಳನ್ನು ಶೀಘ್ರ ಪರಿಹರಿಸಿ. ಸಾಲ ಮನ್ನಾ ವಿಷಯದಲ್ಲಿ ಸರ್ಕಾರ ನಿಗದಿ ಪಡಿಸಿರುವ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಅರ್ಹ ರೈತರಿಗೆ ಯೋಜನೆಯ ಲಾಭ ಒದಗಿಸಿ ಎಂದು ಹೇಳಿದರು. ಹಾಗೂ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಮಾಸಾಶನ ಸೇರಿದಂತೆ ಅನೇಕ ಯೋಜನೆಗಳಿಗೆ ಆಧಾರ್ ಜೋಡಣೆ ಮಾಡಲಾಗುತ್ತದೆ. ಆಧಾರ್ ಜೋಡಣೆ ವಿಳಂಬದಿಂದ ಅಂಕಿ ಅಂಶ ಸಂಗ್ರಹಿಸುವಲ್ಲಿ ಸಾಕಷ್ಟು ವಿಳಂಬವಾಗುತ್ತದೆ. ಇದನ್ನು ತಪ್ಪಿಸಲು ಆಯಾ ಗ್ರಾಮ ಪಂಚಾಯತಿಗಳಲ್ಲಿ ಇರುವ ಕಿಯೋಸ್ಕಗಳ ಮೂಲಕ ಆಧಾರ್ ಜೋಡಣೆ ಮಾಡುವುದು ಅತ್ಯಂತ ಸುಲಭ ಮತ್ತು ತ್ವರಿತವಾಗಿ ಜೋಡಣೆ ಸಾಧ್ಯವಾಗುತ್ತದೆ ಎಂದರು.  
  ಜಿಲ್ಲೆಯ 333 ಗ್ರಾಮಗಳಲ್ಲಿ ಅಧಿಕೃತ ರುದ್ರಭೂಮಿಗಳಿಲ್ಲ ಎಂಬ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಇಷ್ಟೊಂದು ಗ್ರಾಮಗಳಲ್ಲಿ ರುದ್ರಭೂಮಿ ಇಲ್ಲದಿರಲು ಸಾಧ್ಯವಿಲ್ಲ, ಜನಾಂಗವಾರು ತೆಗೆದುಕೊಂಡಾಗ ಈ ಸಮಸ್ಯೆ ಉದ್ಬವಿಸಬಹುದು. ಇದನ್ನು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
  ಮುಖ್ಯ ಮಂತ್ರಿಗಳ ಗ್ರಾಮವಿಕಾಸ ಯೋಜನೆಯಡಿ ಆಯ್ಕೆಯಾಗಿರುವ ಜಿಲ್ಲೆಯ 20 ಗ್ರಾಮಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ನೀಡಿರುವ ಅನುದಾನವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿ. ಅಭಿವೃದ್ಧಿ ಕಾಮಗಾರಿಯಲ್ಲಿ ವಿಳಂಬವಾದರೆ ಸಂಬಂಧಿಸಿದವರ ಮೇಲೆ ದಂಡ ವಿಧಿಸಿ ಎಂದರು. ಈ ಕಾಮಗಾರಿಗಳನ್ನು ಕೆಆರ್‌ಐಡಿಎಲ್ ಹಾಗೂ ಪಿಆರ್‌ಇಡಿ ನೀಡಲಾಗಿದೆ ಎಂದು ಉಪ ಕಾರ್ಯದರ್ಶಿ ತಿಳಿಸಿದರು. ಯಾವುದೇ ಕಾಮಗಾರಿಗಳನ್ನು ಸರ್ಕಾರಿ ಏಜೆನ್ಸಿಗಳಿಗೆ ವಹಿಸುವಾಗ ಅವರ ತಾಂತ್ರಿಕ ಸಿಬ್ಬಂದಿ, ಸಾಮಾರ್ಥ್ಯವನ್ನು ಆಧರಿಸಿ ನೀಡಬೇಕು. ಟೆಂಡರ್‌ಗಳಿಗೆ ಅವಕಾಶವಿದ್ದಾಗ ಟೆಂಡರ್‌ಗಳ ಮೂಲಕವೇ ಕಾಮಗಾರಿಗಳನ್ನು ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
  ಸಮುದಾಯ ಶೌಚಾಲಯ, ವೈಯಕ್ತಿಕ ಶೌಚಾಲಯ ನಿರ್ಮಾಣ ವಿಷಯಗಳಲ್ಲಿ ನಿಗದಿತ ಅವಧಿಯೊಳಗೆ ಗುರಿ ಸಾಧನೆ ಮಾಡಬೇಕು. ವಸತಿ ಯೋಜನೆಯ ಕುರಿತು ಅರ್ಹ ಫಲಾನುಭವಿಗಳಿಗೆ ಈ ಪ್ರಕ್ರಿಯೆಯ ಮಾಹಿತಿ ಇರುವುದಿಲ್ಲ. ಆದ್ದರಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಸೌಲಭ್ಯವನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಸತಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಲು ಫಲಾನುಭವಿಗಳಿಗೆ ಉದ್ಬವಿಸುವ ಸಮಸ್ಯೆ, ತೊಂದರೆಗಳನ್ನು ನಿವಾರಿಸಲು ವಸತಿ ಸಹಾಯಕರನ್ನು ನೇಮಕ ಮಾಡಿದಲ್ಲಿ ತ್ವರಿತ ಅನುಷ್ಠಾನ ಸಾಧ್ಯವಾಗಲಿದೆ ಎನ್ನುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ತಿಳಿಸಿದರು.  
  ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಸ್ನೆÃಹಾ ಜೈನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ ಕ್ಷಿÃರಸಾಗರ, ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 
======
ಅತಿಥಿ ಶಿಕ್ಷಕ ಹುದ್ದೆಗೆ ನೇಮಕ : ಅರ್ಜಿ ಅಹ್ವಾನ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಕೊಪ್ಪಳ  ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ (ಪ.ಪಂ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  
ಹಿರೇವಂಕಲಕುಂಟಾ (ಪ.ಪಂ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ವಿಜ್ಞಾನ ವಿಷಯದ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕಾಗಿದ್ದು, ಅರ್ಹ ಅತಿಥಿ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ. 25 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗೆ ಬಿ.ಎಸ್‌ಸಿ, ಬಿ.ಎಡ್ (ಸಿ.ಬಿ.ಝಡ್) ಹಾಗೂ ಟಿ.ಇ.ಟಿ ತೆರ್ಗಡೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಮಾಸಿಕ ವೇತನ 10,000 ರೂಪಾಯಿಗಳಾಗಿದ್ದು, ಶಿಕ್ಷಕರ ಸೇವೆಯು ಖಾಯಂ ಪ್ರಾಂಶುಪಾಲರು ಬರುವವರೆಗೆ ಅಥವಾ ಇಲಾಖೆಯ ಮುಂದಿನ ಆದೇಶದವರೆಗೆ ಮಾತ್ರ ಸಿಮಿತವಾಗಿದ್ದು. ಸೇವೆಯು ತಾತ್ಕಲಿಕವಾಗಿರುತ್ತದೆ ಮತ್ತು ಖಾಯಂ ನೇಮಕಾತಿ ಅಥವಾ ಯಾವುದೇ ತರಹದ ಕೃಪಾಂಕಕ್ಕೆ ಅರ್ಹರಿರುವದಿಲ್ಲ. ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತ ಅತಿಥಿ ಶಿಕ್ಷಕರು ನಿಗದಿತ ಅವಧಿಯೊಳಗೆ ಸದರಿ ಶಾಲೆಯ ಕಾರ್ಯಲಯದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ವಸತಿ ಶಾಲೆಯ  ಪ್ರಾಚಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಜು 18 ರಂದು ಸಾರ್ವಜನಿಕರ ಕುಂದು ಕೊರತೆ ಹಾಗೂ ದೂರು ಸ್ವಿÃಕಾರ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಆರಕ್ಷಕ ಉಪಾಧೀಕ್ಷಕರು ಹಾಗೂ ಆರಕ್ಷಕ ನಿರೀಕ್ಷಕರು ಭ್ರಷ್ಟಾಚಾರ ನಿಗ್ರಹ ದಳ, ಕೊಪ್ಪಳ ಇವರು ಜು 18ರಂದು  ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವಿÃಕರಿಸಿ, ಅವರ ಅಹವಾಲುಗಳನ್ನು ಆಲಿಸಲಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜು 18 ರಂದು ಬೆಳಿಗ್ಗೆ 11 ಯಲಬುರ್ಗಾದ ತಹಶಿಲ್ದಾರ ಕಛೇರಿಯ ಆವರಣದಲ್ಲಿ, ಅದೇ ದಿನ  ಸಾಯಂಕಾಲ 04-00 ಗಂಟೆಯಿಂದ  ಕುಕನೂರಿನ ತಹಶಿಲ್ದಾರ ಕಛೇರಿಯ ಆವರಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವಿÃಕರಿಸಿ, ಅವರ ಅಹವಾಲುಗಳನ್ನು ಆಲಿಸಲಿದ್ದು,         ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಬಹುದಾಗಿದೆ.  
ಹೆಚ್ಚಿನ ಮಾಹಿತಿಗೆ ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೆÇಲೀಸ್ ಠಾಣೆ, ಪಿಡಬ್ಲೂಡಿ ಕ್ವಾಟ್ರಸ್ ನಂ-5, ಈಶ್ವರ ಗುಡಿ ಹಿಂದುಗಡೆ, ಕೊಪ್ಪಳ ದೂರವಾಣಿ ಸಂಖ್ಯೆ 08539-221833, ಮೊ.ಸಂ – 9480806244, 9480806319, 9480806320, ಅಥವಾ ಇ-ಮೇಲ್ ವಿಳಾಸ  ಜsಠಿಞಠಿಟ.ಚಿಛಿb@ಞಚಿಡಿಟಿಚಿಣಚಿಞಚಿ.gov.iಟಿ ನೇದಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಪ್ರಕಟಣೆ ತಿಳಿಸಿದೆ.
======
ಜು. 20 ರಂದು ಮುನಿರಾಬಾದ್‌ನಲ್ಲಿ ಗ್ರಾಹಕರ ಕುಂದು ಕೊರತೆಗಳ ಸಭೆ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಮುನಿರಾಬಾದ್ ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪ ವಿಬಾಗ ವತಿಯಿಂದ ಗ್ರಾಹಕರ ಕುಂದು ಕೊರತೆ ಪರಿಹರಿಸುವ ಉದ್ದೆÃಶದಿಂದ ಗ್ರಾಹಕ ಸಭೆಯನ್ನು ಜುಲೈ. 20 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿ ಆರಣದಲ್ಲಿ ಏರ್ಪಡಿಸಲಾಗಿದೆ.  
ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೆÃಶದಿಂದ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರದಂದು ಗ್ರಾಹಕರ ಸಭೆ ಏರ್ಪಡಿಸಿ, ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವಂತೆ ಮುಖ್ಯ ಅಭಿಯಂತರರು (ವಿ)., (ಆಪರೇಷನ್ಸ್), ನಿಗಮ ಕಛೇರಿ, ಜೆಸ್ಕಾಂ, ಕಲಬುರಗಿ ರವರು ಮತ್ತು ಕಾರ್ಯನಿರ್ವಾಹಕ ಅಭಿಯಂತರರು (ವಿ)., ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಜೆಸ್ಕಾಂ, ಕೊಪ್ಪಳ ರವರು ಸೂಚನೆ ನೀಡಿದ್ದು, ಜುಲೈ. 20 ರಮದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿ ಆರಣದಲ್ಲಿ ಗ್ರಾಹಕರ ಸಭೆಯನ್ನು ಏರ್ಪಡಿಸಲಾಗಿದೆ.  ಮತ್ತು ಅದೇ ದಿನ ಮಧ್ಯಾಹ್ನ 3 ಗಂಟೆಗೆ ಇ.ಎಚ್.ಟಿ ಮತ್ತು ಎಚ್.ಟಿ ಸ್ಥಾವರಗಳ ಗ್ರಾಹಕರ ಸಭೆಯನ್ನು ಆಯೋಜಿಸಲಾಗಿದೆ.  ಆದ್ದರಿಂದ ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪ ವಿಬಾಗ ಮುನಿರಾಬಾದ್ ವ್ಯಾಪ್ತಿಯ ಎಲ್ಲಾ ಗ್ರಾಹಕರು ಈ ಸಭೆಗೆ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದು ಮುನಿರಾಬಾದ್ ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪ ವಿಬಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ ಸಂಗೀತ ನೃತ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜು. 17 (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯೆ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಸಂಗೀತ ನೃತ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  
ಕರ್ನಾಟಕ ಸಂಗೀತ ನೃತ್ಯೆ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಯಲ್ಲಿ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ, ಸಂಗೀತ, ನೃತ್ಯ, ಕಥಾ ಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ ಅಭ್ಯಾಸ ಮಾಡುತ್ತಿರುವ ಹಾಗೂ ಹೆಚ್ಚಿನ ಅಭ್ಯಾಸ ಮಾಡಲಿಚ್ಛಿಸುವ ವಿದ್ಯಾರ್ಥಿಗಳಿಗೆ ಮೂರು ತಿಂಗಳವರೆಗೆ ತರಬೇತಿ ನೀಡಲಿದೆ.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 14 ರಿಂದ 26 ವರ್ಷದ ವಯೋಮಿತಿಯಲ್ಲಿರಬೇಕು.  
ಅರ್ಜಿ ಸಲ್ಲಿಸಲು ಜು. 30 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಕಛೇರಿ ವೇಳೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 05.30ರ ವರೆಗೆ ಅಥವಾ ಅಕಾಡೆಮಿ  ಅಂರ್ತಜಾಲ ತಾಣವಾದ ತಿತಿತಿ.ಞಚಿಡಿಟಿಚಿಣಚಿಞಚಿsಚಿಟಿgeeಣಚಿಟಿಡಿiಣಥಿಚಿಚಿಛಿಚಿಜemಥಿ.ಛಿom ಮೂಲಕ ಪಡೆದು ಅರ್ಜಿಯನ್ನು ಸಲ್ಲಿಸಬೇಕಾಗಿದೆ.  ಅಲ್ಲದೇ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ ಅರ್ಜಿಯನ್ನು ಪಡೆಯಬಹುದಾಗಿದೆ.  ಅರ್ಜಿಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ. ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕಾಗಿದೆ ಎಂದು ರಿಜಿಸ್ಟಾçರ್ ಚಲುವಾದಿ ಎನ್.ಅಶೋಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
DSC_0356.JPG
DSC_0364.JPG
DSC_0355.JPG
DSC_0362.JPG
Koppal News & Photos July-17.doc
Reply all
Reply to author
Forward
0 new messages