ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
2025ನೇ ಸಾಲಿನ ಕರ್ನಾಟಕ ನಿರಪರಾಧಿಕರಣ ಉಪಬಂಧಗಳ ತಿದ್ದುಪಡಿ ವಿಧೇಯಕದ ಪ್ರಸ್ತಾವವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳು, ಮೂಲಭೂತ ಸೌಕರ್ಯ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಂಡಿಸಿದರು. ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.
ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ( ತಿದ್ದುಪಡಿ) ವಿಧೇಯಕ-2025 ಅಂಗೀಕಾರ
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
2025ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ( ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು.
ಕಂದಾಯ ಸಚಿವರು 2025ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ( ತಿದ್ದುಪಡಿ) ವಿಧೇಯಕವನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಕರ್ನಾಟಕ ಸರ್ಕಾರದಿಂದ ರಾಜ್ಯದೊಳಗಿನ ಸರಕುಗಳ ಅಥವಾ ಸೇವೆಗಳ ಅಥವಾ ಅವುಗಳೆರಡರ ಪೂರೈಕೆಯ ಮೇಲೆ ತೆರಿಗೆಯನ್ನು ವಿಧಿಸಲು ಹಾಗೂ ಸಂಗ್ರಹಿಸುವ ಉದ್ದೇಶದಿಂದ ಕರ್ನಾಟಕ ಸರಕು ಮತ್ತು ಸೇವೆಗಳು ತೆರಿಗೆ ಅಧಿನಿಯಮ-2017ನ್ನು ಅಧಿನಿಯಮಗಳಿಸಲಾಗಿದೆ. ಆದಾಗ್ಯೂ ಹೊಸ ತೆರಿಗೆ ವ್ಯವಸ್ಥೆಯು ಕೆಲವೊಂದು ತೊಂದರೆಗಳನ್ನು ಎದುರಿಸಿದೆ. ಈ ತೊಂದರೆಗಳನ್ನು ನಿವಾರಿಸಲು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ-2017 (2017ರ ಕರ್ನಾಟಕ ಅಧಿನಿಯಮ 27)ನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ ಎಂದು ವಿಧೇಯಕದ ಕುರಿತು ಸದನಕ್ಕೆ ವಿವರಿಸಿ ವಿಧೇಯಕಯವನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಕೋರಿದರು. ಸದನದಲ್ಲಿ ಶಾಸಕ ಅರಗ ಜ್ಞಾನೇಂದ್ರ ಅವರು ಸರಕು ಮತ್ತು ಸೇವೆಗಳ ತೆರಿಗೆ ಸೋರಿಕೆ ಆಗುತ್ತಿದ್ದು, ರೈತನಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ವಿಧೇಯಕಕ್ಕೆ ತಿದ್ದುಪಡಿ ಅವಶ್ಯಕತೆಯಿದೆ ಎಂದು ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧಾನಸಭೆಯ ಶಾಸಕರು ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡಿತು.
ಜಿಲ್ಲಾ ಆಸ್ಪತ್ರೆಗಳಲ್ಲಿ 24 ಗಂಟೆ ಸೇವೆ ಒದಗಿಸಲು ಕ್ರಮ- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಜಿಲ್ಲಾ ಆಸ್ಪತ್ರೆಗಳಲ್ಲಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ತುಂಬುವುದರ ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸೇವೆ ಲಭಿಸುವಂತೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಸದಸ್ಯರಾದ ಆನಂದ್ ಕೆ.ಎಸ್.ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರು ಕಡೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದೆ. 13 ಹಾಸಿಗೆಗಳು, ಐ.ಸಿ.ಯು ಸೌಲಭ್ಯ ಹೊಂದಿರುತ್ತದೆ. ಕಡೂತು ತಾಲ್ಲೂಕು ಆಸ್ಪತ್ರೆಗೆ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ, ಬೀರೂರು ಸಾರ್ವಜನಿಕ ಆಸ್ಪತ್ರೆ, ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು ಹತ್ತಿರ ಇವೆ.
ಬೀರೂರು ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳಾದ ಸಿವಿಲ್ ಕಾಮಗಾರಿಗಳು, ವಿದ್ಯುತ್ ರಿಪೇರಿ ಕೆಲಸ, ನೈರ್ಮಲೀಕರಣ, ಛಾವಣಿ ದುರಸ್ಥಿ, ಕಾಮಗಾರಿ ಹಾಗೂ ಹಾಲಿ ಇರುವ ಸಿಬ್ಬಂದಿ ಗೃಹಗಳು ತುಂಬಾ ಹಳೆಯದಾಗಿರುವುದರಿಂದ ಸದರಿ ಆಸ್ಪತ್ರೆ ಮತ್ತು ವಸತಿ ಗೃಹಗಳಿಗೆ ಬಣ್ಣ ಬಳಿಯುವುದ, ನೈರ್ಮಲೀಕರಣ ಹಾಗೂ ವಸತಿ ದುರಸ್ಥಿ ಕೆಲಸಗಳು ಅಗತ್ಯವಿದ್ದು, ಅನುದಾನದ ಲಭ್ಯತೆಗೆ ಅನುಗುಣವಾಗಿ ಕ್ರಮ ವಹಿಸಲಾಗುವುದು ಹಾಲಿ ಅರವಳಿಕೆ ವೈದ್ಯರ ಹುದ್ದೆ ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುತ್ತಿದೆ. ಹಾಲಿ ಇರುವ ಖಾಲಿ ಇರುವ ವೈದ್ಯರ ಸಂಖ್ಯೆಗಿಂತ ದುಪ್ಪಟ್ಟು ವೈದ್ಯರುಗಳನ್ನು ಒದಗಿಸಿಕೊಡುಲು ಕ್ರಮ ವಹಿಸಲಾಗುತ್ತಿದೆ ಅಲ್ಲದೇ ಎಲ್ಲಾ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸೇವೆ ಸಿಗುವಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
ಉಡುಪಿ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 162 ಹುದ್ದೆಗಳನ್ನು ಸೃಜನೆ ಮಾಡಲು ಕ್ರಮ -ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಜಿಲ್ಲಾ ಆಸ್ಪತ್ರೆಗಳಲ್ಲಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಯಶ್ ಪಾಲ್ ಎ ಸುವರ್ಣ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 126 ಹಾಸಿಗೆಗಳಿಗೆ 162 ಹುದ್ದೆಗಳನ್ನು ಸೃಜನೆ ಮಾಡುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾಸ್ಪತ್ರೆಯ ನಿರ್ಮಾಣಕ್ಕೆ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತು ಕಾಮಗಾರಿಗಳು ಪೂರ್ಣಗೊಂಡ ಮೇಲೆ ಹಾಗೂ ಪೀಠೋಪಕರಣಗಳು ಮತ್ತು ಸಲಕರಣೆಗಳಿಗೆ ಅನುಮೋದನೆ ದೊರೆತು, ಟೆಂಡರ್ ಪ್ರಕ್ರೆಯೆ ಅಂತಿಮಗೊಂಡನಂತರ ಈಗಾಗಲೇ ಮಂಜೂರಾಗಿರುವ 124 ಹುದ್ದೆಗಳಲ್ಲಿ ಭರ್ತಿಯಾಗದೇ ಖಾಲಿ ಇರುವ 69 ಹುದ್ದೆಗಳ ಭರ್ತಿಗೆ ಹಾಗೂ ಹೊಸ ಹುದ್ದೆಗಳ ಸೃಜನೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು.
ಉಡುಪಿ ಜಿಲ್ಲಾ ನೂತನಾ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸುವ ಕಟ್ಟಡ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಪ್ರಸ್ತುತ ವಿದ್ಯುದೀಕರಣದ ಕೆಲಸ ಮುಗಿದಿದ್ದು, ವಿದ್ಯುತ್ ಸಂಪರ್ಕ ಪಡೆಯಲು ಕ್ರಮ ವಹಿಸಲಾಗಿದೆ. ಇತರೆ ಮೂಲ ಸೌಕರ್ಯ ಕಾಮಗಾರಿಗೆ ಅಂದಾಜನ್ನು ತಾಂತ್ರಿಕ ಸಲಹಾ ಸಮಿತಿ ಸೂಚನೆಯಂತೆ ಪ್ರತ್ಯೇಕವಾಗ ರೂ. 4.50 ಕೋಟಿಗಳಿಗೆ ಪರಿಷ್ಕರಿಸಿದ್ದು, ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಅನುದಾನದ ಲಭ್ಯತೆಗನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯಲ್ಲಿ ತಿಳಿಸಿದರು.
ಬೀರೂರು ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳಾದ ಸಿವಿಲ್ ಕಾಮಗಾರಿಗಳು, ವಿದ್ಯುತ್ ರಿಪೇರಿ ಕೆಲಸ, ನೈರ್ಮಲೀಕರಣ, ಛಾವಣಿ ದುರಸ್ಥಿ, ಕಾಮಗಾರಿ ಹಾಗೂ ಹಾಲಿ ಇರುವ ಸಿಬ್ಬಂದಿ ಗೃಹಗಳು ತುಂಬಾ ಹಳೆಯದಾಗಿರುವುದರಿಂದ ಸದರಿ ಆಸ್ಪತ್ರೆ ಮತ್ತು ವಸತಿ ಗೃಹಗಳಿಗೆ ಬಣ್ಣ ಬಳಿಯುವುದು, ನೈರ್ಮಲೀಕರಣ ಹಾಗೂ ವಸತಿ ದುರಸ್ಥಿ ಕೆಲಸಗಳು ಅಗತ್ಯವಿದ್ದು, ಅನುದಾನದ ಲಭ್ಯತೆಗೆ ಅನುಗುಣವಾಗಿ ಕ್ರಮ ವಹಿಸಲಾಗುವುದು ಹಾಲಿ ಅರವಳಿಕೆ ವೈದ್ಯರ ಹುದ್ದೆ ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುತ್ತಿದೆ. ಹಾಲಿ ಇರುವ ಖಾಲಿ ಇರುವ ವೈದ್ಯರ ಸಂಖ್ಯೆಗಿಂತ ದುಪ್ಪಟ್ಟು ವೈದ್ಯರುಗಳನ್ನು ಒದಗಿಸಿಕೊಡುಲು ಕ್ರಮ ವಹಿಸಲಾಗುತ್ತಿದೆ ಅಲ್ಲದೇ ಎಲ್ಲಾ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸೇವೆ ಸಿಗುವಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
ಆನೆ ಕಾರ್ಯಪಡೆ ಕ್ಯಾಂಪ್ -ಸಚಿವ ಈಶ್ವರ್ ಬಿ. ಖಂಡ್ರೆ
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಅತ್ಯಂತ ಶೀಘ್ರವಾಗಿ ಬಿಕ್ಕೋಡು ಭಾಗದಲ್ಲಿಯೇ ಆನೆ ಕಾರ್ಯಪಡೆಯ ಕ್ಯಾಂಪ್ ನ್ನು ತುರ್ತಾಗಿ ನಿರ್ಮಾಣ ಮಾಡಲು ನಿರ್ಧರಿಸಿದೆ, ಸ್ಥಳ ಪರಿಶೀಲಿಸಿ, ಕಡಿಮೆ ಸಮಯದಲ್ಲಿ ಕ್ಯಾಂಪ್ ನಿರ್ಮಾಣ ಮಾಡಲು ಅನುಕೂಲವಾಗುವಂತಹ Precast Wall ಸಾಮಗ್ರಿಯನ್ನು ಬಳಸಿ ಕ್ಯಾಂಪ್ ನ್ನು ನಿರ್ಮಿಸಲಾಗುವುದು ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಹೆಚ್.ಕೆ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರು ಬೇಲೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮಾನವ –ಕಾಡಾನೆ ಸಂಘರ್ಷ ಹೆಚ್ಚಾದರಿಂದ ಸಕಲೇಶಪುರದ ಕೇಂದ್ರಸ್ಥಾನವನ್ನು ಹೊಂದಿದ್ದ ಆನೆ ಕಾರ್ಯಪಡೆಯನ್ನು ಬೇಲೂರಿಗೆ ಸ್ಥಳಾಂತರಿಸಲಾಗಿದೆ.
ಬಿಕ್ಕೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಅತೀ ಹೆಚ್ಚಾಗಿದ್ದು, 09 ಸಂಖ್ಯೆ ಮಾನವ ಜೀವ ಹಾನಿ ಪ್ರಕರಣಗಳು ಮತ್ತು ಸಾಕಷ್ಟು ಬೆಳೆನಾಶ ಪ್ರಕರಣಗಳು ದಾಖಲಾಗಿದ್ದು, 50ಕ್ಕೂ ಹೆಚ್ಚು ಕಾಡಾನೆಗಳು ಬೇಲೂರು ತಾಲ್ಲೂಕು, ಬಿಕ್ಕೋಡು ಭಾಗದಲ್ಲಿಯೇ ಮೊಕ್ಕಾಂ ಹೂಡಿರುತ್ತವೆ.
ಆನೆ ಕಾರ್ಯಪಡೆ ಕ್ಯಾಂಪ್ ನಿರ್ಮಿಸಲು ಕೆಟಿಟಿಪಿ ಕಾಯ್ದೆಯಂತೆ ಸದರಿ ಕಾಮಗಾರಿಯನ್ನು ನಿರ್ವಹಿಸಲು ಟೆಂಡರ್ ಕಾಮಗಾರಿಯನ್ನು ಪ್ರಾರಂಭಗೊಳಿಸಿ, ಇಲಾಖೆಯ ಅಧಿಕಾರಿಗಳಿಂದ ಕ್ಷೇತ್ರ ತಪಾಸಣೆ ನಡೆಸುವ ಸಂದರ್ಭದಲ್ಲಿ ಕಾಮಗಾರಿಯ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೂರುಗಳು ಸ್ವೀಕೃತವಾದ್ದರಿಂದ ಕಾಮಗಾರಿಯ ಗುಣಮಟ್ಟದ ಪರಿಶೀಲನೆಗಾಗಿ, ಬಳಕೆಯಾಗುತ್ತಿರುವ ಸಾಮಗ್ರಿಗಳನ್ನು ಪರೀಕ್ಷಿಸಲು ಸುಸಜ್ಜಿತ ಪ್ರಯೋಗಾಲಯ ಹೊಂದಿರುವ ಮಲ್ನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್, ಹಾಸನ ಇವರಿಗೆ Third Party Inspection ನಡೆಸಿಕೊಡಲು ಕೋರಿದೆ. Third Party Inspection ವರದಿ ಬಂದ ನಂತರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ವಿಧಾನಸಭೆಯಲ್ಲಿ ಉತ್ತರಿಸಿದರು.
ಶಿಕ್ಷಕರ ಖಾಲಿ ಹುದ್ದೆಗಳ ವರ್ಗಾವಣೆ ಹಾಗೂ ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ- ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಈಗಾಗಲೇ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡು ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಯ್ಯ ಇವರ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಪರವಾಗಿ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಖಾಲಿ ಇರುವ 38666 ಹುದ್ದೆಗಳಿಗೆ ಎದುರಾಗಿ ಶೇ 90%ನ್ನು 34027 ಅತಿಥಿ ಶಿಕ್ಷಕರನ್ನು (ಪಿ.ಎಸ್.ಟಿ ಮತ್ತು ಜಿಪಿಟಿ ಸೇರಿದಂತೆ) ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಉಳಿದ ಶೇ 10 ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಪ್ರಕ್ರಿಯೆಯ ನಂತರ ಅಗತ್ಯಗೆ ಅನುಗುಣವಾಗಿ ಹುದ್ದೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಆಸ್ಪತ್ರೆ ಉತ್ತಮ ಸೇವೆ ಒದಗಿಸುತ್ತಿದೆ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೋಧನಾ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆ 950 ಹಾಸಿಗೆಗಳ ಆಸ್ಪತ್ರೆಯಾಗಿ ಉತ್ತಮ ಸೇವೆ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಚನ್ನಬಸಪ್ಪ ಇವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಶಿವಮೊಗ್ಗ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೋಧನಾ ಆಸ್ಪತ್ರೆಯಾಗಿ ಹಸ್ತಾಂತರವಾಗಿರುತ್ತದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೋಧನಾ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆ 950 ಹಾಸಿಗೆಗಳ ಆಸ್ಪತ್ರೆಯಾಗಿ ಹೊರ ರೋಗಿಗಳ ಮತ್ತು ಒಳ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಿದೆ. ಶಿವಮೊಗ್ಗ ಜಿಲ್ಲೆಯ ಜನಸಂಖ್ಯೆಯು 18 ಲಕ್ಷವಿದ್ದು, IPHS -2022ರಂತೆ 10 ರಿಂದ 20 ಲಕ್ಷ ಜನಸಂಖ್ಯೆಗೆ 400 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗದಲ್ಲಿ 950 ಹಾಸಿಗೆಗಳ ಮೆಗ್ಗಾನ್ ಭೋದನಾ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿರುವುದರಂದ ಶಿವಮೊಗ್ಗ ಕೇಂದ್ರಸ್ಥಾನದಲ್ಲಿ ಮತ್ತೊಂದು ಜಿಲ್ಲಾ ಆಸ್ಪತ್ರೆಯನ್ನು ಪ್ರಾರಂಭಿಸಲು ಅವಕಾಶವಿರುವುದಿಲ್ಲ ಎಂದು ಸಚಿವರು ತಿಳಿಸಿದರು.
ಚಿಕ್ಕಮಗಳೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಪೂರ್ಣ- ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ)
ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ನಿರ್ಮಾಣ ಸ್ಥಳಕ್ಕೆ ಹೊಂದಿಕೊಂಡಂತೆ ಓ.ಪಿ.ಡಿ ಮತ್ತು ಸೂಪರ್ ಸ್ಪೆಷಾಲಿಟಿ ಬ್ಲಾಕ್, ಎಂಸಿಹೆಚ್ ಬ್ಲಾಕ್ ಹಾಗ ಪುರುಷ ಮತ್ತು ಮಹಿಳಾ ವೈದ್ಯರುಗಳ ವಸತಿಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಫೆಬ್ರವರಿ 2026ರ ಅಂತ್ಯಕ್ಕೆ ಪೂರ್ಣಗೊಳಿಸಲು ಅಂದಾಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ತಮ್ಮಯ್ಯ ಹೆಚ್.ಡಿ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ನಿರ್ಮಾಣ ಸ್ಥಳಕ್ಕೆ ಹೊಂದಿಕೊಂಡಂತೆ ಓ.ಪಿ.ಡಿ ಮತ್ತು ಸೂಪರ್ ಸ್ಪೆಷಾಲಿಟಿ ಬ್ಲಾಕ್, ಎಂಸಿಹೆಚ್ ಬ್ಲಾಕ್ ಹಾಗ ಪುರುಷ ಮತ್ತು ಮಹಿಳಾ ವೈದ್ಯರುಗಳ ವಸತಿಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ರೂ. 174.00 ಕೋಟಿಗಳ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿದೆ. ಸದರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಶೇಕಡಾ 73ರಷ್ಟು ಕಾಮಗಾರಿಗಳು ಪೂರ್ಣಗೊಂಡಿರುತ್ತವೆ. ಸದರಿ ಕಾಮಗಾರಿಯು ಫೆಬ್ರವರಿ 2026ರ ಅಂತ್ಯಕ್ಕೆ ಪೂರ್ಣಗೊಳಿಸಲು ಅಂದಾಜಿಸಲಾಗಿದೆ.
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಇದೂವರೆಗೂ 433.94 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಕಾಮಗಾರಿಯನ್ನು ಸೆಪ್ಟೆಂಬರ್ 2025ರ ಅಂತ್ಯಕ್ಕೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಸದರಿ ಕಾಮಗಾರಿಗೆ ರೂ. 21.00 ಕೋಟಿಗಳ ಅನುದಾನ ಬಿಡುಗಡೆ ಮಾಡುವುದು ಬಾಕಿಯಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ವಿಧಾನಸಭೆಯಲ್ಲಿ ತಿಳಿಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಒಟ್ಟು 192 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿ- ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ):
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನಲ್ಲಿ ಕಳೆದ 3 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಒಟ್ಟು 192 ಅರ್ಹ ಫಲಾನುಭವಿಗಳಿಗೆ ಆದ್ಯತಾ (PHH) ಪಡಿತರ ಚೀಟಿಯನ್ನು ವಿತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖಾ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ: ಭರತ್ ಶೆಟ್ಟಿ ವೈ ಇವರ ಪ್ರಶ್ನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖಾ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆದ್ಯತಾ ಪಡಿತರ ಚೀಟಿ ಕೋರಿ ಈವರೆಗೆ 17,456 ಸಾಮಾನ್ಯ ಅರ್ಜಿಗಳು ಸಲ್ಲಿಕೆಯಾಗಿರುತ್ತವೆ. ಇದರಲ್ಲಿ 14,043 ಅರ್ಜಿಗಳನ್ನು ಅನುಮೋದಿಸಿದ್ದು, 2,554 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಒಟ್ಟು 16,597 ಅರ್ಜಿಗಳನ್ನು ವಿಲೇಗೊಳಿಸಲಾಗಿರುತ್ತದೆ ಹಾಗೂ 859 ಅರ್ಜಿಗಳು ವಿಲೇಗೆ ಬಾಕಿ ಇರುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನಲ್ಲಿ ಆದ್ಯತಾ ಪಡಿತರ ಚೀಟಿ ಕೋರ 5,785 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ 4937 ಅರ್ಜಿಗಳನ್ನು ಅನುಮೋದಿಸಿದ್ದು, 786ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು ಒಟ್ಟು 5723 ಅರ್ಜಿಗಳನ್ನು ವಿಲೇಗೊಳಿಸಲಾಗಿರುತ್ತದೆ ಹಾಗೂ 62 ಅರ್ಜಿಗಳು ವಿಲೇಗೆ ಬಾಕಿ ಇರುತ್ತವೆ ಎಂದು ಉತ್ತರಿಸಿದರು.
ಹದಿಮೂರು ಲಕ್ಷಕ್ಕಿಂತ ಹೆಚ್ಚು ಜನರು ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಈಗಾಗಲೇ ಸರ್ವೆ ಕಾರ್ಯ ನಡೆದಿದ್ದು ಆರ್ಥಿಕವಾಗಿ ಸದೃಡವಾಗಿರುವವರ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆದು ಎಪಿಎಲ್ ಕಾರ್ಡ್ ಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ. ಹಾಲಿ ತಂತ್ರಾಂಶ ತಿಂಗಳಿಗೆ ಒಮ್ಮೆ ಮಾತ್ರ ಕಾರ್ಯಗತವಾಗಿರುತ್ತದೆ. ಇದನ್ನು ಮಾರ್ಪಾಡು ಮಾಡಬೇಕೆಂದು ಶಾಸಕರು ಕೇಳಿದಾಗ ತಂತ್ರಾಂಶದಲ್ಲಿ ಬದಲಾವಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮಾನವ ಹಾಗೂ ಕಾಡಾನೆಗಳ ಸಂಘರ್ಷ ತಡೆಗಟ್ಟಲು ಸೌರಬೇಲಿ, ಆನೆಕಂದಕ, ರೈಲ್ವೇಬ್ಯಾರಿಕೇಟ್ ನಿರ್ಮಾಣ- ಸಚಿವ ಈಶ್ವರ್ ಬಿ. ಖಂಡ್ರೆ
ಬೆಂಗಳೂರು,ಆಗಸ್ಟ್ 14 (ಕರ್ನಾಟಕ ವಾರ್ತೆ):
ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ಉಪಯೋಗಿಸಿದ ರೈಲ್ವೇ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೇ ಬ್ಯಾರಿಕೇಡ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದು, ಒಟ್ಟು 428.00ಕಿಮೀ ರೈಲ್ವೇ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಇವರ ಪ್ರಶ್ನೆಗೆ ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಉಂಟಾಗುವ ಸಂಘರ್ಷ ತಡೆಗಟ್ಟಲು ರೇಡಿಯೋ ಕಾಲರ್ ಅಳವಡಿಸಿರುವ ಕಾಡಾನೆಗಳ ಚಲನ-ವಲನಗಳನ್ನು ದಿನನಿತ್ಯ ಗಮನಿಸಲು ಇಲಾಖಾ ವತಿಯಿಂದ “ಹೆಜ್ಜೆ” ಎಂಬ ಡ್ಯಾಶ್ ಬೋರ್ಡ್ ನ್ನು ತಯಾರಿಸಿದೆ. ಮಾನವ –ಆನೆ ಸಂಘರ್ಷ ಹೆಚ್ಚಿರುವ 10 ಜಿಲ್ಲೆಗಳಲ್ಲಿ “ಆನೆ ಎಲ್ಲಿ” ಎಂಬ ತಂತ್ರಜ್ಞಾನ ವ್ಯವಸ್ಥೆಯ್ನು ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯು ಸಾರ್ವಜನಿಕ ದೂರುಗಳು, ಗಸ್ತುತಿರುಗುವಿಕೆ ವಿವಿಧ ಮಾಹಿತಿಗಳ ಮೂಲಕ ಒಂದು ಪ್ರದೇಶದಲ್ಲಿ ಆನೆಗಳ ಚಲನವಲನವನ್ನು ಮೇಲ್ವಿಚಾರಣೆ ಮಾಡುತ್ತದೆ. ಮತ್ತು ಸಾರ್ವಜನಿಕರಿಗೆ ಮುಂಚಿನ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲು ಸಹಾಯ ಮಾಡುತ್ತದೆ. ಅರಣ್ಯದಂಚಿನ ಆಯ್ದ ಪ್ರದೇಶಗಳಲ್ಲಿ AI Based Camera ಗಳನ್ನು ಅಳವಡಿಸಲಾಗಿದ್ದು, ವನ್ಯಪ್ರಾಣಿಗಳ ಚಲನವಲನಗಳನ್ನು ಗಮನಿಸಲಾಗುತ್ತಿದೆ., ಡ್ರೋನ್ ಗಳ ಮುಖಾಂತರ ವನ್ಯಪ್ರಾಣಿಗಳ ಚಲನವಲನಗಳನ್ನು ಗಮನಸಲಾಗುತ್ತಿದೆ.
ರೈತರಿಗೆ ಸಬ್ಸಿಸಿ ದರದಲ್ಲಿ ಸೋಲಾರ್ ಬೇಲಿ ನಿರ್ಮಾಣ ಮಾಡಲು ಉತ್ತೇಜನ ನೀಡಲಾಗುತ್ತಿದೆ ಹಾಗೂ ಅರಣ್ಯದ ಅಂಚಿನಲ್ಲಿ ಬರುವ ಖಾಸಗಿ ಜಮೀನುಗಳ ಸುತ್ತಾ ಸರ್ಕಾರದ ವತಿಯಿಂದ ದೊರಕುವ ಶೇ 50 ಸಬ್ಸಿಡಿಯನ್ನು ಬಳಸಿಕೊಂಡು ಸೌರಶಕ್ತಿ ಬೇಲಿಯನ್ನು ನಿರ್ಮಿಸಲಾಗುತ್ತಿದೆ. ರಕ್ಷಿತ ಅರಣ್ಯ ಪ್ರದೇಶಗಳ ಕಾಡಂಚಿನ ಆಯ್ದ ಗ್ರಾಮಗಳಿಗೆ ಎಲ್ ಪಿ ಜಿ ಗ್ಯಾಸ್, ಸೋಲಾರ್ ದೀಪಗಳನ್ನು ಹಾಗೂ Cattle Shed ನಿರ್ಮಾಣ ಮಾಡಲು ಸಹಾಯವನ್ನು ಇಲಾಖೆಯ ವತಿಯಿಂದ ನೀಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ವಿಧಾನಸಭೆಯಲ್ಲಿ ಉತ್ತರಿಸಿದರು.
ರೈತರ ಹಿತ ಕಾಪಡಲು ನಾವು ಬದ್ದ
ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮ ವಹಿಸಲಾಗುವುದು – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ರೈತರ ಹಿತ ಕಾಪಾಡಲು ನಾವು ಸದಾ ಬದ್ದರಾಗಿದ್ದೇವೆ. ನಾಡಪ್ರಭು ಕೆಂಪೇಗೌಡ ಬಡಾವಣೆ ನಿಮಾರ್ಣಕ್ಕಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ಬಿ.ಡಿ.ಎ ಕಾಯ್ದೆ 1976 ಕಲಂ 17(1) ಮತ್ತು (3) ರಡಿ ದಿನಾಂಕ: 21-05-2008 ರಂದು ಒಟ್ಟು 4814 ಎಕರೆ 15 ಗುಂಟೆ ವಿಸ್ತೀರ್ಣದ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳು ಪ್ರಥಮಿಕ ಅಧಿಸೂಚನೆ ಹೊರಡಿಸಲಾಗಿದೆ.
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಕಾಯ್ದೆ ಕಲಂ 19 (1)ರಡಿಯಲ್ಲಿ ದಿನಾಂಕ: 18-02-2010 ರಂದು 4043 ಎಕರೆ 27 ಗುಂಟೆ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಅಂತಿಮಗೊಳಿಸಿ ಇಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರಿಸಿದ ಜಮೀನಿನ ವಿಸ್ತೀರ್ಣ 2806 ಎಕರೆ 08 ಗುಂಟೆ, ಇದರಲ್ಲಿ ಒಟ್ಟು 30296 ನಿವೇಶನಗಳನ್ನು ರಚಿಸಲಾಗಿದ್ದು, 22481 ನಿವೇಶನಗಳನ್ನು ಹಂಚಿಕೆ / ಹರಾಜು ಮಾಡಲಾಗಿದೆ.
ಡಾ. ಕೆ. ಶಿವರಾಮಕಾರಂತ ಬಡಾವಣೆ ರಚನೆಗಾಗಿ ದಿನಾಂಕ: 30-12-2008ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿ ದಿನಾಂಕ: 30-10-2018 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಡಾ. ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಸಂಪರ್ಕವನ್ನು ಸುಧಾರಿಸಲು ಆರ್.ಎಂ.ಪಿ 2015 ರಸ್ತೆ ಮತ್ತು ಬೈಪಾಸ್ ರಸ್ತೆ ಗಾಗಿ ದಿನಾಂಕ: 18-02-2022 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ದಿನಾಂಕ: 06-08-2022ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಅಂತಿಮ ಅಧಿಸೂಚನೆಯಲ್ಲಿ ಬಿಟ್ಟುಹೋದ ಭೂಮಿಯನ್ನು ಬಡಾವಣೆಯೊಳಗೆ ಗುರುತಿಸಲು ದಿನಾಂಕ: 19-08-2022ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ದಿನಾಂಕ: 18-10-2022 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅಪೀಲ್ ಸಂ. 252/2017ರಲ್ಲಿ Status quo ಆದೇಶ ನೀಡಿರುವುದರಿಂದ ನಿವೇಶನಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ತಿಳಿಸಿದರು.
ಐತಿಹಾಸಿಕ ಸ್ಥಳಗಳಲ್ಲದೇ ಸುತ್ತ ಮುತ್ತಲಿನ ಪರಿಸರವನ್ನು ಸಹ ಅಭಿವೃದ್ಧಿಗೊಳಿಸಲಾಗುವುದು
ಮಹತ್ವದ ತಾಣಗಳಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು – ಸಚಿವ ಹೆಚ್.ಕೆ. ಪಾಟೀಲ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಹಂಪಿ, ಬೇಲೂರು-ಹಳೇಬೀಡು, ಪಟ್ಟದಕಲ್ಲು ಪ್ರವಾಸಿ ತಾಣಗಳು ವಿಶ್ವ ಪಾರಂಪರಿಕಾ ತಾಣಗಳಾಗಿದ್ದು ಹಂಪಿ ಪ್ರವಾಸಿ ತಾಣದಂತೆ ಬೇಲೂರು-ಹಳೇಬೀಡು, ಪಟ್ಟದಕಲ್ಲು ಮತ್ತು ಐಹೊಳೆಗಳನ್ನು ಮುಂತಾದ ಮಹತ್ವದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮಹತ್ವದ ತಾಣಗಳಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಐತಿಹಾಸಿಕ ಸ್ಥಳಗಳಲ್ಲದೇ ಅದರ ಸುತ್ತಮುತ್ತಲಿನ ಪರಿಸರವನ್ನೂ ಸಹ ಅಭಿವೃದ್ಧಿಪಡಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಐಹೊಳೆ ಗ್ರಾಮದಲ್ಲಿ ರಕ್ಷಿತ ಮತ್ತು ಅರಕ್ಷಿತ ಸ್ಮಾರಕಗಳಲ್ಲಿ ವಾಸವಾಗಿರುವ 134ಕ್ಕೂ ಹೆಚ್ಚು ಕುಟುಂಬಗಳಿಗೆ 13.11 ಎಕರೆ ಜಮೀನನ್ನು ರೂ.350.00 ಲಕ್ಷಗಳ ವೆಚ್ಚದಲ್ಲಿ ಖರೀದಿಸಿ, ಲೇ-ಔಟ್ ಅಭಿವೃದ್ಧಿ ಮಾಡಿ ಪುನರ್ ವಸತಿ ಕಲ್ಪಿಸಲಾಗುತ್ತಿದೆ. ಈ ಸಂಬಂಧ, ಲೇ-ಔಟ್ ಅಭಿವೃದ್ಧಿ ಪಡಿಸಲು ಸಮಗ್ರ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ರೂ.30.00 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತವಾದ ಹೋಟಲ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು.
ಪಟ್ಟದಕಲ್ಲನ್ನು ರೂ.29.25 ಕೋಟಿಗಳ ವೆಚ್ಚದಲ್ಲಿ ಟೂರಿಸಂ ಪ್ರಾಜಾ ನಿರ್ಮಿಸಲಾಗುತ್ತಿದೆ. ಬೇಲೂರು ಮತ್ತು ಹಳೇಬೀಡುನ್ನು ರೂ.20.71 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತವಾದ ತ್ರಿ-ಸ್ಟಾರ್ ಹೋಟಲ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂಪಿ ಮಾದರಿಯಲ್ಲಿ ಬೇಲೂರು ಹಳೇಬೀಡು, ಪಟ್ಟದಕಲ್ಲು ಮತ್ತು ಐಹೊಳೆ ಪ್ರವಾಸಿ ತಾಣಗಳ ಬಗ್ಗೆ ಹೆಚ್ಚಿನ ಪ್ರಚಾರ ಕಾರ್ಯಗಳನ್ನು ಕೈಗೊಂಡು ಹೆಚ್ಚಿನ ದೇಶ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲಾಗುವುದು.
ನೇಪಾಳ, ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಶ್ರೀಲಂಕಾಗಳು ಅಭಿವೃದ್ಧಿ ಹೊಂದುತ್ತಿರುವ ದೇಶಗಳಾಗಿದ್ದು, ಅಲ್ಲಿನ ಪ್ರವಾಸ ದರಗಳು ನಮ್ಮ ರಾಜ್ಯಕ್ಕಿಂತ ಕಡಿಮೆ ಇದೆ. ಆದರೆ, ನಮ್ಮ ರಾಜ್ಯವು ಐತಿಹಾಸಿಕ, ಸಾಂಸ್ಕೃತಿಕ, ಪಾರಂಪರಿಕ ಮತ್ತು ಶ್ರೀಮಂತವಾಗಿರುವ ನೈಸರ್ಗಿಕವಾಗಿ ತಾಣಗಳನ್ನು ಒಳಗೊಂಡಿದ್ದು, ನೇಪಾಳ, ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಶ್ರೀಲಂಕಾಗಳಲ್ಲಿನ ಪ್ರವಾಸಿ ತಾಣಗಳಲ್ಲಿ ಒದಗಿಸುವ ಆತಿಥ್ಯ ಸೇವೆಗಳಿಗಿಂತ ನಮ್ಮ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಮತ್ತು ವೃತ್ತಿಪರ ಸೇವೆಗಳನ್ನು ಒದಗಿಸಲಾಗುತ್ತಿದೆ. ಹಾಗಾಗಿ, ನಮ್ಮ ರಾಜ್ಯದಲ್ಲಿನ ದರಗಳು ನೇಪಾಳ, ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಶ್ರೀಲಂಕಾಗಳಲ್ಲಿನ ಪ್ರವಾಸಿ ತಾಣಗಳಲ್ಲಿ ದರಗಳಿಗಿಂತ ಹೆಚ್ಚಾಗಿವೆ.
ಹಾಗೇಯೇ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಾದ ಇಂಗ್ಲೆಂಡ್, ಜಪಾನ್, ಜರ್ಮನಿ, ಅಮೇರಿಕಾಗಳಲ್ಲಿ ಪ್ರವಾಸಿ ದರಗಳು ನಮ್ಮ ರಾಜ್ಯಕ್ಕಿಂತ ಹೆಚ್ಚಾಗಿದ್ದು, ಗುಣಮಟ್ಟದ ಮತ್ತು ವೃತ್ತಿಪರ ಸೇವೆಗಳನ್ನು ಒದಗಿಸಲಾಗುವುದಿಲ್ಲ. ಹಾಗೇಯೇ, ದಕ್ಷಿಣ ಆಫ್ರಿಕಾ, ರಷ್ಯಾ ಮತ್ತು ಸ್ಪೇನ್ ರಾಷ್ಟ್ರಗಳು ನಮ್ಮ ದರಗಳನ್ನೇ ಹೊಂದಿವೆ.
ಕರ್ನಾಟಕಕ್ಕೆ ದೇಶ-ವಿದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಪ್ರಸ್ತುತ ನೂತನ ಕರ್ನಾಟಕ ಪ್ರವಾಸೋದ್ಯಮ ನೀತಿ-2024-29 ಅನ್ನು ಈಗಾಗಲೇ ಜಾರಿ ಮಾಡಲಾಗಿದ್ದು, ಪ್ರವಾಸೋದ್ಯಮ ಅನುಷ್ಠಾನಗೊಳಿಸಲು ರೂ.1350 ಕೋಟಿಗಳ ಅನುದಾನವನ್ನು ಆಯ-ವ್ಯಯದಲ್ಲಿ ಮೀಸಲಿರಿಸಲಾಗಿದೆ. ರೂ.8000 ಕೋಟಿಗಳ ನೇರ ಹೂಡಿಕೆಯನ್ನು ಆಕರ್ಷಿಸುವ ಹಾಗೂ 1.5 ಲಕ್ಷ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ ರೂ.551.78 ಕೋಟಿಗಳ ಮೊತ್ತದ 25 ಹೋಟಲ್ ಹಾಗೂ ಇತರೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಹೋಟಲ್ ಯೋಜನೆಗಳಿಗೆ ಸಹಾಯಧನ ನೀಡುವ ಮೂಲಕ ನಮ್ಮ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹೋಟಲ್ಗಳು ಮತ್ತು ಕೊಠಡಿಗಳ ಸಂಖ್ಯೆಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.
ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆ ಯೋಜನೆ ಮೂಲಕ ನಮ್ಮ ಸ್ಮಾರಕಗಳನ್ನು ದತ್ತು ನೀಡುವ ಮೂಲಕ ಅವುಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಉದ್ಯಮಿಗಳು, ಅನಿವಾಸಿ ಭಾರತೀಯರು ಈ ಯೋಜನೆ ಯಶಸ್ಸಿಗೆ ಕೈಜೋಡಿಸಿದ್ದು ಮೊದಲ ಹಂತದಲ್ಲಿ 7ಕ್ಕೂ ಹೆಚ್ಚು ಸ್ಮಾರಕಗಳನ್ನು ದತ್ತು ನೀಡಲಾಗಿದೆ.
ದೇಶೀಯ ಮತ್ತು ವಿದೇಶಿಯ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ರವರ ಸಹಯೋಗದೊಂದಿಗೆ ಕರ್ನಾಟಕದ ಪ್ರಮುಖ ಐಶಾರಾಮಿ ರೈಲು "ದಿ ಗೋಲ್ಡನ್ ಚಾರಿಯಟ್' ಅನ್ನು ದಿನಾಂಕ: 21-12-2024ರಂದು ಮರು ಆರಂಭಿಸಲಾಗಿದ್ದು, 'Pride of Karnataka (5ರಾತ್ರಿ-6 ದಿನ) ಹಾಗೂ 'Sojourn of the South (ರಾತ್ರಿ-4ದಿನ) ಎಂಬ ವಿಶೇಷ ಪ್ರವಾಸಗಳನ್ನು ಆಯೋಜಿಸಲಾಗುತ್ತಿದೆ
ಜರ್ಮನ್ ದೇಶದ ಲುಫ್ತಾನ ವಾಯುಯಾನ ಸಂಸ್ಥೆಯ ಸಹಯೋಗದೊಂದಿಗೆ ಜರ್ಮನಿಯ ಟ್ರಾವೆಲ್ ಆಪರೇಟರ್ಗಳೊಂದಿಗೆ FAM ಪ್ರವಾಸ ಏರ್ಪಡಿಸಲಾಗುತ್ತದೆ. ವಿವಿಧ ಟ್ರಾವೆಲ್ Influencers ಸಹಯೋಗದೊಂದಿಗೆ ರಾಜ್ಯದ ಪ್ರವಾಸಿ ತಾಣಗಳ ಪ್ರಚಾರ ಕೈಗೊಳ್ಳಲಾಗುತ್ತಿದೆ.
ರಾಜ್ಯದಲ್ಲಿ ಅತ್ಯಂತ ಸುಧೀರ್ಘ ಕಾಲದ ಶಿಲಾವಿನ್ಯಾಸಗಳು ಮತ್ತು ದೇವಸ್ಥಾನಗಳನ್ನು ಕಾಪಾಡಲು (ಬಿದ್ದು ಹೋಗುವ ಸ್ಥಿತಿಯಲ್ಲಿರುವ ಶಿಲಾ ವಿನ್ಯಾಸಗಳು ಮತ್ತು ದೇವಸ್ಥಾನಗಳು) ಸ್ಮಾರಕ ದತ್ತು ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿರುವ ಇತಿಹಾಸ ಪ್ರಸಿದ್ಧ ಸ್ಮಾರಕಗಳನ್ನು ಸಂರಕ್ಷಿಸಲು ಮತ್ತು ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು Adopt A Monument ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ, ಯೋಜನೆಯಡಿಯಲ್ಲಿ ಒಟ್ಟು ನಾಲ್ಕು ಸಂಸ್ಥೆಯವರು 18 ಸ್ಮಾರಕಗಳ ಸಂರಕ್ಷಣೆಗೆ ಆಸಕ್ತಿ ವ್ಯಕ್ತಪಡಿಸಿರುತ್ತಾರೆ.
3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಸ್ಮಾರಕಗಳ ಡಿಜಿಟಲ್ ದಾಖಲೀಕರಣ ಮಾಡಲು 2019-20ನೇ ಸಾಲಿನ ಆಯವ್ಯಯ ಭಾಷಣದ (ಕಂಡಿಕೆ- 309) ರ ಘೋಷಣೆಯನ್ವಯ ಇಲಾಖೆಯ ಒಟ್ಟು 844 ಸಂರಕ್ಷಿತ ಸ್ಮಾರಕಗಳನ್ನು ಐದು ವರ್ಷಗಳಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು, ಇವರ ಮೂಲಕ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಸ್ಮಾರಕಗಳ ಡಿಜಿಟಲ್ ದಾಖಲೀಕರಣ ಮಾಡುವ ಕಾರ್ಯ ಯೋಜನೆಗೆ ರೂ .64.91 ಲಕ್ಷಗಳ ವೆಚ್ಚದಲ್ಲಿ ಕೈಗೊಳ್ಳಲು ದಿನಾಂಕ:04.10.2019 ರಂದು ಯೋಜನೆಗೆ ಚಾಲನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಗೆ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 14,( ಕರ್ನಾಟಕ ವಾರ್ತೆ) :
ರಾಜ್ಯದಲ್ಲಿ ನಾಗರೀಕ ಸೇವಾ ಮಂಡಳಿ (ಸಿವಿಲ್ ಸರ್ವಿಸ್ ಬೋರ್ಡ್) ರಚನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ದಿನಾಂಕ:26.09.2024 ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆ ಮಾಡುವ ಸಂಬಂಧ ಸಚಿವ ಸಂಪುಟ ಉಪಸಮಿತಿಯನ್ನು ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುತ್ತದೆ.
ಸಚಿವ ಸಂಪುಟ ಉಪಸಮಿತಿಯು ಸಭೆಗಳನ್ನು ನಡೆಸಿ 5ಗ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿ ವನೀಡಿರುವ ಶಿಫಾರಸ್ಸಿನಂತೆ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಹಿರಿಯೂರಿನ ವಾಣಿ ವಿಲಾಸ ಸಾಗರದ ಹಿನ್ನೀರು ಪ್ರದೇಶದಲ್ಲಿ ಜಲ ಕ್ರೀಡೆ ಮತ್ತು ಜಲಸಾಹಸ ಚಟುವಟಿಕೆಗಳನ್ನು ಆಯೋಜಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಸಚಿವ ಹೆಚ್.ಕೆ. ಪಾಟೀಲ
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವಾಣಿ ವಿಲಾಸ ಸಾಗರದ ಹಿನ್ನೀರು ಪ್ರದೇಶದಲ್ಲಿ ಜಲ ಕ್ರೀಡೆ ಮತ್ತು ಜಲಸಾಹಸ ಚಟುವಟಿಕೆಗಳನ್ನು ಆಯೋಜಿಸಲು ಕೆ.ಎಸ್.ಟಿ.ಡಿ.ಸಿ ವತಿಯಿಂದ ನಿಯಮಾನುಸಾರ ಕ್ರಮವಹಿಸಲಾಗುತ್ತಿರುತ್ತದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ನೀತಿ 2024-2029 ರಡಿ ಒಟ್ಟು 1275 ಪ್ರವಾಸಿ ತಾಣಗಳನ್ನು ಗುರುತಿಸಲಾಗಿರುತ್ತದೆ. ಹಿರಿಯೂರಿನ ವಾಣಿ ವಿಲಾಸ ಸಾಗರ, ಚಿರ್ತದುರ್ಗದ ಕೋಟೆ, ನಾಯಕನಹಟ್ಟಿ ಹಾಗೂ ಇತರ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಬೋಟಿಂಗ್, ಕಯಾಕಿಂಗ್, ಜೆಟ್ ಸ್ಕೀ ಬನಾನಾ ರೈಡ್ ಮುಂತಾದ ಸಂಪನ್ಮೂಲ ಚಟುವಟಿಕೆಗಳನ್ನು ನಡೆಸಲು ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ನಿರೀಕ್ಷಿಸಲಾಗುತ್ತಿದ್ದು, ಬಂದ ನಂತರ ಸೂಕ್ತ ಹೂಡಿಕೆದಾರರನ್ನು ಆಯ್ಕೆ ಮಾಡಿ ಜಲಸಾಹಸ ಚಟುವಟಿಕೆಗಳನ್ನು ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮಹಾಕ್ಕಲಾಸಗಿರಿ ಗುಹಾಂತರ ದೇವಾಲಯದಲ್ಲಿ ವಿವಿಧ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ರೂ .200.00 ಲಕ್ಷಗಳಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿರುತ್ತದೆ. ಸದರಿ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ ಪರಿಷ್ಕೃತ ಅಂದಾಜು ಪಟ್ಟಿ ಬರಬೇಕಿರುತ್ತದೆ.
ಕೋಲಾರ ಜಿಲ್ಲೆಯ ಅಂತರಗಂಗೆ ಕಾಶಿ ವಿಶ್ವನಾಥ ದೇವಾಲಯಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ರೂ.50.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೆ.ಆರ್.ಐಡಿಎಲ್ ಸಂಸ್ಥೆಯ ಮೂಲಕ ಕೈಗೊಳ್ಳಲು ಪೂರ್ಣ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆ ಸಹಮತಿ ದೊರೆತ ನಂತರ ಕಾಮಗಾರಿ ಪ್ರಾರಂಭಿಸಬೇಕಿದೆ.
2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ಮಧುಗಿರಿ ಏಕಶಿಲಾ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇ ಇಲಾಖೆಯ ಅಭಿವೃದ್ಧಿಪಡಿಸಲು ಈಗಾಗಲೇ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮ (ಕೆ.ಟಿ.ಐ.ಎಲ್) ಮೂಲಕ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿದ್ದು, ಸದರಿ ಸಂಸ್ಥೆಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ, ಅಧ್ಯಯನ ನಡೆಸಿ ಕಾರ್ಯಸಾಧ್ಯತಾ (Techno-Economic Feasibility Report) ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯನ್ನು ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ (SLSWA) ಗೆ ಸಲ್ಲಿಸಿ ಅನುಮೋದನೆ ಪಡೆದು ಮುಂದಿನ ಕ್ರಮ ವಹಿಸಲಾಗುವುದು.
2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿನ 18 ಜಲಾಶಯಗಳ ಹಿನ್ನೀರಿನಲ್ಲಿ ಹಾಗೂ 10 ಕಡಲ ತೀರಗಳಲ್ಲಿ ಜಲಕ್ರೀಡೆಗಳು ಹಾಗೂ ಜಲ ಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗಳಿಂದ, ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆ.ಎಸ್.ಟಿ.ಡಿ.ಸಿ)ಗಳಿಂದ ಟೆಂಡರ್ ಮೂಲಕ ಖಾಸಗಿ ಸಂಸ್ಥೆಗಳಿಂದ ಜಲಕ್ರೀಡೆಗಳು ಹಾಗೂ ಜಲ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.
ಇದರೊಂದಿಗೆ, ರಾಜ್ಯದ ಜಲಾಶಯಗಳ ಹಿನ್ನೀರುಗಳಲ್ಲಿ ಕಡಲ ತೀರಗಳಲ್ಲಿ ಮತ್ತು ಕೆರೆಗಳಲ್ಲಿ ಜಲಕ್ರೀಡೆಗಳು ಹಾಗೂ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗಳಿಗೆ ಸೂಚನೆಯನ್ನು ನೀಡಲಾಗಿರುತ್ತದೆ.
ಕರ್ನಾಟಕ ಪ್ರವಾಸೋದ್ಯಮ ನೀತಿ-2024-29ರಲ್ಲಿ ರಾಜ್ಯದಲ್ಲಿ ಸಾಹಸ ಪ್ರವಾಸೊದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಕ್ರಮಕ್ಕಾಗಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸುವ
ಕುರಿತು ಜಿಲ್ಲಾ ಮಟ್ಟದ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆ ಸಮಿತಿಗಳನ್ನು ಮತ್ತು ರಾಜ್ಯಮಟ್ಟದ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆ ಸಮಿತಿಯನ್ನು ರಚಿಸಿ, ಸದರಿ ಸಮಿತಿಗಳಿಗೆ ಪ್ರಮುಖ ಜವಾಬ್ದಾರಿಗಳನ್ನು ನಿಗಧಿಪಡಿಸಿ ಆದೇಶಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಮಾಲೋಚಕ ಸಂಸ್ಥೆಯನ್ನು ಆಯ್ಕೆ ಮಾಡಲು ಟೆಂಡರ್ ಪ್ರಕಟಿಸಲಾಗಿದ್ದು, ಸದರಿ ಟೆಂಡರ್ನ ತಾಂತ್ರಿಕ ಬಿಡ್ಡನ್ನು ದಿನಾಂಕ:07.08.2025 ರಂದು ತೆರೆಯಲಾಗಿದ್ದು, ಸದರಿ ಟೆಂಡರ್ನಲ್ಲಿ ಮೂರು ಬಿಡ್ಡುದಾರರು ಭಾಗವಹಿಸಿದ್ದು, ಬಿಡ್ಡುದಾರರು ಸಲ್ಲಿಸಿರುವ ಬಿಡ್ಡುಗಳು ಪರಿಶೀಲನಾ ಹಂತದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಗುರುಪುರ ನದಿ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ (IDD) ರವರೊಂದಿಗೆ ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು ಸದರಿ ಟೆಂಡರ್ Pre-Bid ಸಭೆಯಲ್ಲಿ ಎಂಪ್ಯಾನಲ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡ್ಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ, ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಟೆಂಡರ್ (Open Tender) ಅನ್ನು ಮರುಪಕಟಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು
ಸರ್. ಎಂ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅದಷ್ಟು ಶೀಘ್ರ ಮಹಾನಗರ ಪಾಲಿಕೆ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಆದಷ್ಟು ಶೀಘ್ರವಾಗಿ ಮಹಾನಗರ ಪಾಲಿಕೆಯ ವತಿಯಿಂದ ಆಸ್ಪತ್ರೆ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯೆ ಡಾ. ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ, ಒಟ್ಟಾರೆ ಗುತ್ತಿಗೆ ಮೌಲ್ಯ ರೂ. 1,71,70,290/-ಗಳನ್ನು ಪಾವತಿಸಲಾಗಿರುತ್ತದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ದಿನಾಂಕ:06.01.2011ರಂದು ಸದರಿ ನಾಗರೀಕ ಸೌಲಭ್ಯ ನಿವೇಶನದ ಹಂಚಿಕೆ ಪತ್ರವನ್ನು ನೀಡಲಾಗಿರುತ್ತದೆ. ದಿನಾಂಕ:22.07.2025 ರಂದು 30 ವರ್ಷಗಳ ಅವಧಿಗೆ ಗುತ್ತಿಗೆ ಕರಾರು ಪತ್ರವನ್ನು ನೊಂದಾಯಿಸಲಾಗಿರುತ್ತದೆ.
ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಿಂದ 1.5 ರಿಂದ 02 ಕಿ.ಮೀ ದೂರದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಮ್ಮ ಕ್ಲಿನಿಕ್ ಲಭ್ಯವಿರುತ್ತದೆ. ದಿನಾಂಕ: 22.07.2025 ರಂದು ನಾಗರೀಕ ಸೌಲಭ್ಯ ನಿವೇಶನದ ಗುತ್ತಿಗೆ ಕರಾರು ಪತ್ರವನ್ನು ನೋಂದಾಯಿಸಲಾಗಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಆಸ್ಪತ್ರೆ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಿಶೇಷ ಕಾರ್ಯಪಡೆ ರಚಿಸಲಾಗಿದೆ – ಗೃಹ ಸಚಿವ ಡಾ. ಜಿ. ಪರಮೇಶ್ವರ
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ):
ಸಮಾಜದ ಸ್ವಾಸ್ತ್ಯ ಹಾಗೂ ಶಾಂತಿ ಮತ್ತು ಸುವವ್ಯಸ್ಥೆ ಕಾಪಾಡುವ ದೃಷ್ಠಿಯಿಂದ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ಆದೇಶ ಸಂಖ್ಯೆ: ಹೆಚ್ಡಿ 83 ಪಿಓಪಿ 2025, ದಿನಾಂಕ: 28/05/2025 ಮತ್ತು 11/06/2025ರಲ್ಲಿ ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಗಳಲ್ಲಿ ಕೋಮು ಗಲಭೆಗಳನ್ನು ನಿಗ್ರಹಿಸಲು ಹೊಸದಾಗಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಲಾಗಿರುತ್ತದೆ.
ವಿಶೇಷ ಕಾರ್ಯಪಡೆಯು ದ್ವೇಷ ಭಾಷಣ. ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿತ ಘಟನೆಗಳಿಗಾಗಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸುವವರ ಮೇಲೆ ನಿಗಾ ಇಡುವುದು. ಸಂಭಾವ್ಯ ಕೋಮು ಹಿಂಸಾಚಾರದ ಬಗ್ಗೆ ಕಣ್ಣಾವಲು ಮತ್ತು ಮಾನವ ಗುಪ್ತಚರ ಮೂಲಕ ಎಚ್ಚರಿಕೆ ವ್ಯವಸ್ಥೆಯನ್ನು ರಚಿಸುವುದು. ಪ್ರಾಬಲ್ಯದ ಮೂಲಕ ವಿಶ್ವಾಸ ವೃದ್ಧಿ ಕ್ರಮಗಳನ್ನು ಕೈಗೊಳ್ಳುವುದು. ಮೂಲಭೂತೀಕರಣವನ್ನು ಗುರುತಿಸಲು ಮತ್ತು ಮೇಲ್ವಿಚಾರಣೆ ಕೈಗೊಳ್ಳುವುದು. ಮಾಡಲು ಕ್ರಮಗಳನ್ನು ಹಾಗೂ ಕೋಮು ಗಲಭೆಯ ಸಂದರ್ಭದಲ್ಲಿ ವಿಶೇಷ ಕಾರ್ಯಪಡೆ ಅಧಿಕಾರಿ/ಸಿಬ್ಬಂದಿಗಳು ಅದನ್ನು ನೇರವಾಗಿ ನಿಯಂತ್ರಿಸುವ ಕಾರ್ಯಗಳನ್ನು ಕೈಗೊಳ್ಳುತ್ತವೆ. ಈವರೆಗೆ ಎಸ್.ಎ.ಎಫ್. ಯಾವುದೇ ಕೇಸ್ಗಳನ್ನು ರಿಜಿಸ್ಟರ್ ಮಾಡಿರುವುದಿಲ್ಲ.
ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಕಾರಣಕ್ಕೆ ಕೋಮು ಗಲಭೆಗಳು ನಡೆದಲ್ಲಿ ವಿಶೇಷ ಪಡೆಯು (ಎಸ್.ಎ.ಎಫ್) ಅದನ್ನು ತಡೆಯಲು ನಿಗಾವಹಿಸುತ್ತದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಭೂಗತ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಬೆಂಗಳೂರಿನಲ್ಲಿ ಟ್ರಾಪಿಕ್ ಸಮಸ್ಯೆ ಕಡಿಮೆ ಮಾಡುವ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಭೂಗತ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಕರೆದು ಮೆ. ರೋಡಿಕ್ ಕನ್ಸಲ್ಟೆಂಟ್ಸ್ ಪ್ರೈವೇಟ್ ಲಿಮಿಟೆಡ್, ನವದೆಹಲಿ ರವರಿಗೆ ವಹಿಸಲಾಗಿದೆ.
ಉತ್ತರ - ದಕ್ಷಿಣ ಕಾರಿಡಾರ್ ಯೋಜನೆಯ ಡಿ.ಪಿ.ಆರ್ ತಯಾರಿಸಲು ರೂ.9.45 ಕೋಟಿಗಳಿಗೆ ಹಾಗೂ ಪೂರ್ವ ಪಶ್ಚಿಮ ಕಾರಿಡಾರ್ ಯೋಜನೆಗೆ ಡಿ.ಪಿ.ಆರ್ ತಯಾರಿಸಲು ರೂ.9.89 ಕೋಟಿಗಳಿಗೆ ಕರಾರು ಒಪ್ಪಂದ ಮಾಡಿಕೊಳ್ಳಲಾಗಿದೆ.
ಸದರಿ ಯೋಜನೆಗೆ ಶೇ.80 ಭೂಮಿಗಳನ್ನೇ ಆಯ್ದುಕೊಳ್ಳಲಾಗಿದ್ದು, ಒಟ್ಟು 05 Inter Change ಗಳ ಪೈಕಿ 04 ಜಾಗಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಭೂಮಿಯನ್ನು ಗುರುತಿಸಲಾಗಿದೆ. ಉಳಿಕೆ 01 ಜಾಗವು St. John Hospital ಒಡೆತನಕ್ಕೆ ಸೇರಿದ ಖಾಸಗಿ ಜಮೀನನ್ನು ಗುರುತಿಸಲಾಗಿದೆ.
ಪ್ರಸ್ತುತ ಸರ್ವೇ ಕಾರ್ಯ ಪ್ರಗತಿಯಲ್ಲಿದ್ದು, ಖಾಸಗಿ ಭೂಮಿಗೆ ಟಿ.ಡಿ.ಆರ್ ನಿಯಮಗಳನ್ವಯ ಭೂಸ್ವಾಧೀನ ಪಡಿಸಿಕೊಳ್ಳಲು ಕ್ರಮವಹಿಸಲಾಗುತ್ತದೆ. ಖಾಸಗಿ ಸ್ವತ್ತಿನ ಮಾಲೀಕರು ಟಿ.ಡಿ.ಆರ್. ಗೆ ಒಪ್ಪದಿದ್ದ ಪ್ರಕರಣಗಳಲ್ಲಿ ನಗದು ಪರಿಹಾರ ನೀಡುವ ಮೂಲಕ ಭೂಸ್ವಾಧೀನಪಡಿಸಿಕೊಳ್ಳಲು ರೂ.800.00 ಕೋಟಿಗಳನ್ನು ಕಾಯ್ದಿರಿಸಲಾಗಿದೆ.
ಭಾರತ ಸರ್ಕಾರದ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಹೊರಡಿಸಿರುವ 2006 ರ ಅಧಿಸೂಚನೆ ಅನುಸಾರ, ಪ್ರಸ್ತಾಪಿತ ವಾಹನ ಸುರಂಗ ಮಾರ್ಗ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ ಅನ್ವಯಿಸುವುದಿಲ್ಲವೆಂದು ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಮಂತ್ರಾಲಯ ಅಧಿಸೂಚನೆಯ 7(1) ಹೊರಡಿಸಿರುವ ಅನುಸಾರ ಇಂತಹ ಯೋಜನೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಸದಸ್ಯ ಕಾರ್ಯದರ್ಶಿಗಳು State level Environmental Impact Assessment Agency (SEIAA) ಸಂಸ್ಥೆಯವರು ದಿನಾಂಕ: 26-11-2024 ರ ಪತ್ರದಲ್ಲಿ ವರದಿ ಮಾಡಿರುತ್ತಾರೆ. ಈಗಾಗಲೇ ಮಣ್ಣಿನ ಪರೀಕ್ಷೆಯನ್ನು ಮಾಡಲಾಗಿರುತ್ತದೆ.
ಡಿ.ಪಿ.ಆರ್. ಅನ್ವಯ ಉತ್ತರ-ದಕ್ಷಿಣ ಸುರಂಗ ಮಾರ್ಗ ಯೋಜನೆಯ ಕೋಟಿಗಳು. ಅಂದಾಜು ವೆಚ್ಚ ರೂ .17780.00 ಪ್ರತಿ ಕಿ.ಮೀಗೆ ರೂ.531.00 ಕೋಟಿಗಳು (ಜಿ.ಎಸ್.ಟಿ ಒಳಗೊಂಡಂತೆ) ವೆಚ್ಚವಾಗುತ್ತದೆ. ಜೋಡಿ ಸುರಂಗ (ದ್ವಿ ಪಥ / Twin Tube Tunnel) ಮಾರ್ಗಕ್ಕೆ ರೂ.1062.00 ಕೋಟಿಗಳು ಆಗುತ್ತದೆ.
ಸದರಿ ಸುರಂಗ ಮಾರ್ಗ ಯೋಜನೆಗೆ ಅಗತ್ಯವಿರುವ ಹಣವನ್ನು ಕರ್ನಾಟಕ ಸರ್ಕಾರದ ಗ್ಯಾರಂಟಿ ಆಧಾರದ ಮೇಲೆ, ಹುಡೋ ವತಿಯಿಂದ ಸಾಲದ ರೂಪದಲ್ಲಿ ಸಂಗ್ರಹಿಸಲಾಗುವುದು. ಈ ಯೋಜನೆಯನ್ನು ಸುಧಾರಿತ ಆಧಾರದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದ್ದು, ಶೇ.60% ರಷ್ಟನ್ನು ಖಾಸಗಿ ಪಾಲುದಾರರು ಹೂಡಿಕೆ ಮಾಡುತ್ತಿದ್ದು, ಶೇ.40% ರಷ್ಟು ಮೊತ್ತವನ್ನು ಸರ್ಕಾರವು ವೆಚ್ಚ ಮಾಡಬೇಕಾಗಿರುತ್ತದೆ. ಸದರಿ ವೆಚ್ಚವನ್ನು ಮೆ.ಹುಡೋ ಸಂಸ್ಥೆಯವರಿಂದ ರೂ. 9303.66 ಕೋಟಿಗಳು ಶೇಕಡ 8.95 ರಷ್ಟು ಬಡ್ಡಿ ದರದಲ್ಲಿ ಸಾಲದ ನೆರವನ್ನು ಪಡೆಯಲು ಉದ್ದೇಶಿಸಲಾಗಿದೆ. ಈವರೆಗೂ ಡಿ.ಪಿ.ಆರ್ ತಯಾರಿಕೆಗಾಗಿ ಮಾತ್ರ ಹಣ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಪಿಲಿಕುಳ ನಿಸರ್ಗ ಧಾಮವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ವಹಿಸಲಾಗಿದೆ – ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶ್ಚಿಮ ಘಟ್ಟ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಅದರಂತೆ ಕ್ರಿಯಾಯೋಜನೆಯನ್ನು ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ.
ಪ್ರಾದೇಶಿಕ ವಿಜ್ಞಾನ ಕೇಂದ್ರ ಉನ್ನತೀಕರಣಗೊಳಿಸುವ ನಿಟ್ಟಿನಲ್ಲಿ ಪ್ರೊ.ಯು.ಆರ್.ರಾವ್ ಖಗೋಳಶಾಸ್ತ್ರ, ಮತ್ತು ಬಾಹ್ಯಾಕಾಶ ಗ್ಯಾಲರಿ ನಿರ್ಮಾಣ ಮಾಡಲು Mangalore Refinery and Petrochemicals Limited (MRPL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಸದರಿ ಸಂಸ್ಥೆಯ Corporate Social Responsibility (CSR) ನಿಧಿಯಿಂದ Visvesvaraya Industrial and Technological Museum (VITM) ಮುಖಾಂತರ ಅನುಷ್ಠಾನ ಗೊಳಿಸಲು ಕ್ರಮವಹಿಸಲಾಗುತ್ತಿದೆ. ತಾರಾಲಯಕ್ಕೆ ಲೇಸರ್ ಪ್ರೊಜೆಕ್ಟರ್ ಅಳವಡಿಕೆಯನ್ನು ಕಾರ್ಪೋರೇಟ್ Corporate Social Responsibility (CSR) ನಿಧಿಯಿಂದ ಅನುಷ್ಠಾನಗೊಳಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ.
ಪ್ರಾಧಿಕಾರವನ್ನು ಪಿಲಿಕುಳ ಅಭಿವೃದ್ಧಿ ವ ಮಂಡಳಿ ಮಾಡುವ ಪ್ರಸ್ತಾವನೆ ಕುರಿತು - ಪರಿಶೀಲಿಸಿ ವರದಿ ಸಲ್ಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಇವರನ್ನು ಕೋರಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು.
ಪಿಲಿಕುಳ ಜೈವಿಕ ಉದ್ಯಾನವನವನ್ನು ಮೃಗಾಲಯ ಪ್ರಾಧಿಕಾರಕ್ಕೆ ವಹಿಸುವ ಬಗ್ಗೆ ದಿನಾಂಕ:18.06.2025 ರಂದು ನಡೆದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿದಂತೆ ಜೈವಿಕ ಉದ್ಯಾನವನವು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅವಿಭಾಜ್ಯ ಅಂಗವಾಗಿದ್ದು ಇದರ ಅಸ್ತಿತ್ವವನ್ನು ಪ್ರಾಧಿಕಾರದಲ್ಲೇ ಉಳಿಸಿಕೊಂಡು, ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರಕ್ಕೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಅದರಂತೆ ಮುಂದಿನ ಕ್ರಮವಹಿಸಲಾಗುತ್ತಿದೆ.
ಪಿಲಿಕುಳದ ಸಿಬ್ಬಂದಿಗಳ ವೃಂದ ಮತ್ತು ಗಳ ನೇಮಕಾತಿ ನಿಯಮಗಳನ್ನು ನಿಯಮಾನುಸಾರ ರಚಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ. ಪಿಲಿಕುಳ ನಿಸರ್ಗಧಾಮದ ವಿವಿಧ ಕಟ್ಟಡಗಳು ನಾಗರೀಕ ಸೌಲಭ್ಯಗಳು, ವಿದ್ಯುತ್ ಚಾಲಿತ - ವಾಹನಗಳು, ವ್ಯವಹಾರ ಮಳಿಗೆಗಳ ನಿರ್ವಹಣೆಗೆ ಕ್ರಮವಹಿಸಿದ್ದು, ಪ್ರಸ್ತುತ ವಯಾವುದೇ ಸೌಲಭ್ಯಗಳನ್ನು ನಿಲ್ಲಿಸಿರುವುದಿಲ್ಲ. ಪಿಲಿಕುಳ ನಿಸರ್ಗಧಾಮದ ಯಾವುದೇ ವಿಭಾಗಗಳನ್ನು ಮತ್ತು ಮಾರುಕಟ್ಟೆ - ಮಳಿಗೆಗಳನ್ನು ಸ್ಥಗಿತಗೊಳಿಸಿರುವುದಿಲ್ಲ. ಕರಕುಶಲ ಹಾಗೂ ಇತರ ಸಾಮಾಗ್ರಿಗಳ ಪೂರೈಕೆದಾರರಿಗೆ ಹಣ ಪಾವತಿಗೆ ಯಾವುದೇ ಬಾಕಿ ಇರುವುದಿಲ್ಲ ಎಂದು ಸಚಿವರು ತಿಳಿಸಿದರು.
ಭಧ್ರಾ ಜಲಾಶಯದ ಆವರಣದಲ್ಲಿ ಮೈಸೂರು ಕೆ.ಆರ್.ಎಸ್ ಬೃಂದಾವನ ಮಾದರಿಯ ಉದ್ಯಾನವನ ನಿರ್ಮಾಣಕ್ಕೆ ಕ್ರಮ – ಸಚಿವ ಹೆಚ್.ಕೆ. ಪಾಟೀಲ
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ) :
ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯ ಆವರಣದಲ್ಲಿ ಮೈಸೂರು ಕೆ.ಆರ್.ಎಸ್. ಬೃಂದಾವನ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಸ್ ಬಾನು ಅವರ ಚುಕ್ಕೆ ರುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭದ್ರಾ ಜಲಾಶಯವು ಜಲ ಸಂಪನ್ಮೂಲ ಇಲಾಖೆಯ ವ್ಯಾಪ್ತಿಗೆ ಬರುತ್ತಿದ್ದು, ಸರ್ಕಾರದ ಆದೇಶ ಸಂಖ್ಯೆ: ಪ್ರಇ/250/ಪ್ರವಾಯೋ/2018 ದಿನಾಂಕ: 19.09.2018 ರಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾ ಜಲಾಶಯದ ಆವರಣದಲ್ಲಿ ಉದ್ಯಾನವನ ಹಾಗೂ ಸಂಗೀತ ಕಾರಂಜಿ ನಿರ್ಮಾಣ ಕಾಮಗಾರಿಯನ್ನು ರೂ. 200.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು, ಸದರಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲು ಸರ್ಕಾರದ ಆದೇಶ ಸಂಖ್ಯೆ. ಪುಇ/316/ಪ್ರವಾಯೋ/2018, ದಿನಾಂಕ: 23.11..2018 ರಲ್ಲಿ ಅನುಮೋದನೆ ನೀಡಲಾಗಿರುತ್ತದೆ.
ನಂತರ, ಸರ್ಕಾರದ ಆದೇಶ ಸಂಖ್ಯೆ: ಪ್ರಇ/50/ಟಿಡಿಪಿ/2019 ದಿನಾಂಕ: :10.07.2019 ರನ್ವಯ ಸದರಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಬದಲಾಗಿ KRIDL ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಸರ್ಕಾರದ ಪರಿಷ್ಕೃತ ಅನುಮೋದನೆ ನೀಡಲಾಗಿರುತ್ತದೆ. ತದನಂತರ, ಸರ್ಕಾರದ ಆದೇಶ ಸಂಖ್ಯೆ: ಪ್ರಇ/50/ಟಿಡಿಪಿ/2020, ದಿನಾಂಕ:20.02.2020 ರಲ್ಲಿ ಕಾಮಗಾರಿಗಳನ್ನು ಬದಲಿಸಿ, ತಿದ್ದುಪಡಿ ಆದೇಶ ನೀಡಲಾಗಿರುತ್ತದೆ. ಸದರಿ ಕಾಮಗಾರಿ ಕೈಗೊಳ್ಳಲು ಮೊದಲ ಕಂತಾಗಿ ರೂ. 100.00 ಲಕ್ಷಗಳನ್ನು ವ್ಯವಸ್ಥಾಪಕ ನಿರ್ದೇಶಕರು, KRIDL ಸಂಸ್ಥೆ ಬೆಂಗಳೂರು ಇವರಿಗೆ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.
ಉದ್ಯಾನವನ ನಿರ್ಮಾಣ ಮಾಡಲು ಭದ್ರಾ ಜಲಾಶಯದ ಕೆಳಗಡೆ (ನದಿಯ ಎಡಭಾಗದಲ್ಲಿ) ಸಿಂಗನಮನೆ ಗ್ರಾಮದ ಸರ್ವೆ ನಂ.112ರಲ್ಲಿ ಸುಮಾರು 180 ಎಕರೆ ಜಮೀನು ಲಭ್ಯವಿರುತ್ತದೆ. ಪ್ರವಾಸೋದ್ಯಮ ಇಲಾಖೆಯಿಂದ ಸದರಿ ಉದ್ಯಾನವನ ನಿರ್ಮಾಣ ಯೋಜನೆಯನ್ನು ಕೈಗೊಳ್ಳಲು ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ. ವಿವರವಾದ ಯೋಜನಾ ವರದಿಯನ್ನು ತಯಾರಿಸಲು ವಹಿವಾಟು ಸಲಹೆಗಾರರನ್ನು (Transaction Advisor), ನೇಮಿಸಿ ಅವರ ವರದಿಯನ್ವಯ ಯೋಜನೆಗೆ ತಗಲಬಹುದಾದ ಅಂದಾಜು ಮೊತ್ತದ ಅನುಗುಣವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಶೇಷ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಪಡೆಯುವ ಬಗ್ಗೆ ಅಥವಾ P.P.P ಮಾದರಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಬಾಗಲಕೋಟೆಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ ಕ್ರಮ –ಸಚಿವ ಹೆಚ್.ಕೆ. ಪಾಟೀಲ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ):
ಬಾಗಲಕೋಟೆಯ ಮಲ್ಲಿಕಾರ್ಜುನ ದೇವಸ್ಥಾನವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಿನಾಂಕ:26.07.2025ರ ಪತ್ರದಲ್ಲಿ ಬಾಗಲಕೋಟ ಯುನಿಯನ್ ಆಫ್ ಮರ್ಚಂಟ್ಸ್ ಎಂಟರಪ್ರೈಸರ್ಸ್ ಅಸೋಸಿಯೇಷನ್ (ರಿ) ಬಾಗಲಕೋಟ ಇವರು ಬಾಗಲಕೋಟೆ ತಾಲ್ಲೂಕಿನ ಗುಡ್ಡದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಸೇತುವೆ ನಿರ್ಮಾಣ ಮಾಡಿ ಸುಗಮ ಪ್ರವೇಶದ ವ್ಯವಸ್ಥೆ ಕಲ್ಪಿಸುವುದು ಸ್ಥಳದಲ್ಲಿ ಉದ್ಯಾನವನ, ವೀಕ್ಷಣಾ ಗೋಪುರ ಹಾಗೂ ಶಿವನ ಮಹಾಮೂರ್ತಿ ಸ್ಥಾಪನೆ, ಹಿನ್ನೀರಿನಲ್ಲಿ ಜಲಸಾಹಸ ಚಟುವಟಿಕೆಗಳು ಕಯಾಕಿಂಗ್, ಜೆಟ್ ಸ್ಕೀ, ಬೋಟಿಂಗ್ ವಿಹಾರ ಇತ್ಯಾದಿಗಳನ್ನು ಪ್ರಾರಂಭಿಸುವುದು, ಮಲ್ಲಯ್ಯನ ಗುಡ್ಡದಿಂದ ಹೆರಕಲ್ ಅಣೆಕಟ್ಟಿವರೆಗೆ ಬೋಟಿಂಗ್ ವ್ಯವಸ್ಥೆ ಕಲ್ಪಿಸುವ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ.
ಆದರೆ, ಸದರಿ ದೇವಸ್ಥಾನವು ಶ್ರೀ ಮಲ್ಲಿಕಾರ್ಜುನ ಜೀರ್ಣೋದ್ಧಾರ ಸಮಿತಿ ಬಾಗಲಕೋಟೆ ರವರ ಒಡೆತನದಲ್ಲಿದ್ದು, ಈ ದೇವಸ್ಥಾನವು ಬಾಗಲಕೋಟೆ ತಾಲ್ಲೂಕಿನ ಮಲ್ಲಾಪುರ ಎಂಬ ಗ್ರಾಮದ ವ್ಯಾಪ್ತಿಯಲ್ಲಿದ್ದು ಆಲಮಟ್ಟಿ ಹೀನ್ನಿರಿನಲ್ಲಿ ಸದರಿ ಗ್ರಾಮವು ಮುಳುಗಡೆಯಾದ ಪ್ರಯುಕ್ತ ಗುಡ್ಡದ ಮೇಲಿರುವ ಮಲ್ಲಿಕಾರ್ಜುನ ದೇವಸ್ಥಾನ ಹೊರತುಪಡಿಸಿ ಇಡೀ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಿರುವುದು ತಿಳಿದುಬಂದಿರುತ್ತದೆ.
ಈ ದೇವಸ್ಥಾನವು ಕೃಷ್ಣ ನದಿ ತಟದಲ್ಲಿದ್ದು ಸುತ್ತಮುತ್ತಲಿನ ಪ್ರದೇಶವು ಪರಿಭಾವಿತ ಅರಣ್ಯ ಪ್ರದೇಶವಾಗಿರುತ್ತದೆ (Deemed Forest), ಈ ಪ್ರದೇಶವು ಅರಣ್ಯ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಇಲಾಖೆಗಳ ವ್ಯಾಪ್ತಿಯಡಿಯಲ್ಲಿ ಬರುವುದರಿಂದ ಹಾಗೂ ಗುಡ್ಡದ ಮೇಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವು ಆಲಮಟ್ಟಿ ಹಿನ್ನೀರಿನಲ್ಲಿ ಮುಳಗಡೆಯಾಗಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸ್ಥಳಾಂತರಿಸಲಾಗಿರುತ್ತದೆ.
ಆದ್ದರಿಂದ, ಸದರಿ ದೇವಸ್ಥಾನದ ಬಳಿ ಅಭಿವೃದ್ಧಿ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಕಾಮಗಾರಿಗಳನ್ನು ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆಯನ್ನು ಆಯೋಜಿಸಿ ಸದರಿ ಸಭೆಗೆ ಪರಿಷತ್ ಸದಸ್ಯರಾದ ತಮ್ಮನ್ನೂ ಒಳಗೊಂಡಂತೆ ಸ್ಥಳೀಯ ಜನ ಪ್ರತಿನಿಧಿಗಳು ಪ್ರತಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯವಿರುವ ನಿರಕ್ಷೇಪಣಾ ಪತ್ರಗಳೊಂದಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗುವುದು. ಸದರಿ ವರದಿಗಳು ಸ್ವೀಕೃತವಾದ ನಂತರ ಕ್ರಮವಹಿಸಲಾಗುವುದು.
ಇದಲ್ಲದೇ, ಪ್ರಸ್ತುತ ಭಾರತ ಸರ್ಕಾರದ ಬಂದರುಗಳು, ಹಡಗು ಮತ್ತು ಜಲಮಾರ್ಗಗಗಳ ಸಚಿವಾಲಯದ ಅಧೀನದಲ್ಲಿರುವ Inland Waterways Authority of India (IWAI) ಪ್ರಾಧಿಕಾರವು ರಿವರ್ ಕ್ರೂಸ್ ಪ್ರವಾಸೋದ್ಯಮದ (River Cruise Tourism) ಅಭಿವೃದ್ಧಿಗಾಗಿ River Cruise in India ಎಂಬ ವರದಿಯನ್ನು ಸಿದ್ಧಪಡಿಸಿರುತ್ತದೆ. ಈ ವರದಿಯಲ್ಲಿ ಕರ್ನಾಟಕದಲ್ಲಿ 12 ಸಂಭಾವ್ಯ ರಾಷ್ಟ್ರೀಯ (National Waterways) ಜಲಮಾರ್ಗಗಗಳನ್ನು ಗುರುತಿಸಲಾಗಿದೆ. ಅದರಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೃಷ್ಣಾ ನದಿಯು ಕೂಡ ಒಂದಾಗಿರುತ್ತದೆ.
ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳಿಗೆ ನದಿ ತೀರದಲ್ಲಿ ಹೊಂದಿಕೊಂಡಿರುವ ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಕ್ರೂಸ್ ಟೂರಿಸಂ ಅನ್ನು ಕೈಗೊಳ್ಳಲು ಆಲಮಟ್ಟಿ ಮತ್ತು ಹೆರಕಲ್ ನಡುವಿನ ಒಟ್ಟು 12 ಕಿಲೋಮೀಟರ್ ಕ್ರೂಸ್ ಸಂಚರಿಸುವ ಮಾರ್ಗದಲ್ಲಿ ಅಂದಾಜು ವೆಚ್ಚ ರೂ.16.95 ಕೋಟಿಗಳಲ್ಲಿ ಎರಡು ಕಾಂಕ್ರೀಟ್ ಫ್ಲೋಟಿಂಗ್ ಜೆಟ್ಟಿಗಳನ್ನು ಹಾಗೂ ಯಾದಗಿರಿ ಜಿಲ್ಲೆಯ ನಾರಾಯಣಸಾಗರ ಆಣೆಕಟ್ಟಿನ ಹತ್ತಿರ ಒಂದು ಕಾಂಕ್ರೇಟ್ ಪ್ಲೋಟಿಂಗ್ ಜೆಟ್ಟಿನ್ನು ನಿರ್ಮಿಸಲು ಹಾಗೂ ಸದರಿ ಸ್ಥಳಗಳಲ್ಲಿ Land side facilities ಕೈಗೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಪೆರಿಫೆರಲ್ ರಿಂಗ್ ರಸ್ತೆ – 2 ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ – ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ):
ಪೆರಿಫೆರಲ್ ರಿಂಗ್ ರಸ್ತೆ – 2 ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೆರಿಫೆರಲ್ ರಿಂಗ್ ರಸ್ತೆ-2 ಯೋಜನೆಗಾಗಿ ದಿನಾಂಕ:12.12.2005 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಉದ್ದೇಶಿತ 52.60 ಕಿ.ಮೀ ಉದ್ದದ ಪೆರಿಫೆರಲ್ ರಿಂಗ್ ರಸ್ತೆ-2 ಪೈಕಿ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗಿನ (ಎಂ.ಎ.ಆರ್) 10.77ಕಿ.ಮೀ ಉದ್ದದ ರಸ್ತೆ ಕಾಮಗಾರಿಯು ಮುಕ್ತಾಯ ಹಂತದಲ್ಲಿರುತ್ತದೆ. ಉಳಿದ ಜಮೀನುಗಳಿಗೆ ಸಂಬಂಧಿಸಿದಂತೆ ಜೆ.ಎಂ.ಸಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ಪೆರಿಫೆರಲ್ ವರ್ತುಲ ರಸ್ತೆ ಭಾಗ-2 ಯೋಜನೆಗಾಗಿ ದಿನಾಂಕ:12.12.2005ರಂದು 1862 ಎಕರೆ 10ಗುಂಟೆ ಹಾಗೂ ದಿನಾಂಕ:15.11.2006 ರಂದು 854ಎಕರೆ ಒಟ್ಟು 2716 ಎಕರೆ 10 ಗುಂಟೆ ಜಮೀನುಗಳನ್ನು ಭೂ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆಗಳನ್ನು ಹೊರಡಿಸಲಾಗಿರುತ್ತದೆ.
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗಿನ ಫೆರಿಫೆರಲ್ ವರ್ತುಲ (ಎಂ.ಎ.ಆರ್.) ರಸ್ತೆಗೆ ಅವಶ್ಯಕವಾದ 321ಎಕರೆ 10ಗುಂಟೆ ಜಮೀನಿಗೆ ದಿನಾಂಕ:27.07.2011 ರಂದು ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 1976 ರಂತೆ ಭೂಸ್ವಾಧೀನದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
10.77 ಕಿ. ಮೀ ಉದ್ದದ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗಿನ ಫೆರಿಫೆರಲ್ ರಿಂಗ್ ರಸ್ತೆ-2 (ಎಂ.ಎ.ಆರ್.) ಕಾಮಗಾರಿಯು ಮುಕ್ತಾಯ ಹಂತದಲ್ಲಿರುತ್ತದೆ. ಉಳಿದಂತೆ, ಫೆರಿಫೆರಲ್ ರಿಂಗ್ ರಸ್ತೆ-2 ನಿರ್ಮಾಣಕ್ಕಾಗಿ ಅವಶ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಕಾರ್ಯದರ್ಶಿಗಳಿಂದ ಕಾಗದ ಪತ್ರಗಳ ಮಂಡನೆ
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ):
ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರು ಸಭೆಯ ಮುಂದಿಡಲಾದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ಕಿತ್ತೂರು ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025, ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025 ಮತ್ತು ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ 2025 ನ್ನು ಮಂಡಿಸಿದರು.
ವಿಧಾನ ಪರಿಷತ್ ನಲ್ಲಿ ವಿಧೇಯಕಗಳ ಅಂಗೀಕಾರ
ಬೆಂಗಳೂರು, ಆಗಸ್ಟ್ 14, (ಕರ್ನಾಟಕ ವಾರ್ತೆ):
ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ಕಿತ್ತೂರು ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025, ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025, ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025 ಮತ್ತು ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025 ನ್ನು ಅಂಗೀಕಾರಕ್ಕಾಗಿ ಮಂಡಿಸಿದರು. ಸದನದಲ್ಲಿ ಎಲ್ಲರ ಒಮ್ಮತದಿಂದ ವಿಧೇಯಕಗಳು ಅಂಗೀಕಾರವಾದವು, ಮಾನ್ಯ ಸಭಾಪತಿಗಳು ಎಲ್ಲಾ ವಿಧೇಯಕಗಳನ್ನು ಅಂಗೀಕರಿಸಿದರು.