You do not have permission to delete messages in this group
Copy link
Report message
Show original message
Either email addresses are anonymous for this group or you need the view member email addresses permission to view the original message
to ವೀರಕನ್ನಡಿಗ
ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲನೆ ಒಂದು ದಿನ ಕಡಲನು
ಕೂಡಬಲ್ಲನೆ ಒಂದು ದಿನ
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲನೆ ಒಂದು ದಿನ ಕಡಲನು
ಕೂಡಬಲ್ಲನೆ ಒಂದು ದಿನ
ಸಾವಿರ ಹೊಳೆಗಳು ತುಂಬಿ ಹರಿದರೂ
ಒಂದೇ ಸಮನಾಗಿಹುದಂತೆ
ಸುನೀಲ ವಿಸ್ತರ ತರಂಗ ಶೋಭಿತ
ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೇ ಒಂದು ದಿನ
ಅದರೊಳು ಕರಗಲಾರನೇ ಒಂದು ದಿನ
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲನು
ಸೇರಬಲ್ಲನೇನು?
ಸೇರಬಹುದೆ ನಾನು? ಕಡಲ ನೀಲಿಯೊಳು
ಕರಗಬಹುದೇ ನಾನು?