----- ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು -----

8 views
Skip to first unread message

ಶರತ್ ಕೊಟ್ಟದಮನೆ

unread,
Feb 13, 2008, 11:12:02 PM2/13/08
to ವೀರಕನ್ನಡಿಗ
----- ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು -----

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಲುಹೀನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪ ಕಲೆಯಚ್ಚರಿಯ ಕರುಗೋಡು
ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು

----- ಹುಯಿಲಗೋಳ ನಾರಾಯಣರಾಯರು
Reply all
Reply to author
Forward
0 new messages